ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ತೈಲ ಬೆಲೆ ಹೆಚ್ಚಳ ಮಾಡಿದ್ದರೂ ದೆಹಲಿಯಲ್ಲಿ ಶುಕ್ರವಾರ(ಜನವರಿ 15, 2021) ಪೆಟ್ರೋಲ್ ಬೆಲೆಯಲ್ಲಿ ಸ್ಥಿರತೆ ಕಂಡು ಬಂದಿರುವುದಾಗಿ ವರದಿ ತಿಳಿಸಿದೆ.
ಗುರುವಾರ(ಜನವರಿ 13) ದೆಹಲಿಯಲ್ಲಿ ದಾಖಲೆ ಮಟ್ಟದಲ್ಲಿ ಲೀಟರ್ ಪೆಟ್ರೋಲ್ ಬೆಲೆ 84.70ರೂಪಾಯಿಗೆ ಏರಿಕೆಯಾಗಿತ್ತು. ಇನ್ನು ಕೆಲವೇ ದಿನಗಳಲ್ಲಿ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ. ಅಲ್ಲದೇ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 85 ರೂಪಾಯಿಗೆ ಏರಿಕೆಯಾಗಬಹುದು ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ
ವಾಣಿಜ್ಯ ನಗರಿ ಮುಂಬೈನಲ್ಲಿ ಬುಧವಾರ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 91 ರೂಪಾಯಿಗೆ ಏರಿಕೆಯಾಗಿದ್ದು, ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 25 ಪೈಸೆ ಏರಿಕೆಯಾಗಿರುವುವುದಾಗಿ ವರದಿ ತಿಳಿಸಿದೆ.
ರಾಷ್ಟ್ರರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಇಂದು 23 ಪೈಸೆ ಹಾಗೂ ಡೀಸೆಲ್ ಬೆಲೆ 26 ಪೈಸೆಯಷ್ಟು ಏರಿಕೆಯಾಗಿದೆ. ತೈಲ ಮಾರುಕಟ್ಟೆಯು ಬಿಡೆಗೊಳಿಸಿದ ಪ್ರಕಟಣೆ ಪ್ರಕಾರ, ಬೆಲೆ ಹೆಚ್ಚಳದ ನಂತರ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 84.20 ರೂಪಾಯಿ,, ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 74.38ಕ್ಕೆ ಏರಿಕೆಯಾಗಿತ್ತು.
ಇದನ್ನೂ ಓದಿ:ವಿಜಯಪುರ: ಹೊತ್ತಿ ಉರಿದ ಕಬ್ಬಿನ ಗದ್ದೆ, ಟ್ರಾಕ್ಟರ್; ಲಕ್ಷಾಂತರ ರೂ. ನಷ್ಟ