Advertisement

ಪೆಟ್ರೋಲ್ ಬಂಕ್ ಮಾಲೀಕನ ಅಪಹರಣ ಯತ್ನ: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಮಾಲೀಕ ಸೇಫ್

03:22 PM Oct 01, 2022 | Team Udayavani |

ವಾರಣಾಸಿ : ಎಸ್‌ಯುವಿ ಕಾರಿನಲ್ಲಿ ಬಂದ ನಾಲ್ವರ ತಂಡವೊಂದು ಪೆಟ್ರೋಲ್ ಪಂಪ್ ಮಾಲೀಕರನ್ನು ಅಪಹರಿಸಲು ವಿಫಲ ಯತ್ನ ನಡಿಸಿರುವ ಘಟನೆ ನಡೆದಿದೆ.

Advertisement

ಗುರುವಾರ ರಾತ್ರಿ ಶಿವಪುರಿಯ ತರ್ನಾ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಾರಿನಲ್ಲಿ ಬಂದ ನಾಲ್ವರ ತಂಡ ಪೆಟ್ರೋಲ್ ಹಾಕುವ ನೆಪದಲ್ಲಿ ಪೆಟ್ರೋಲ್ ಪಂಪ್ ಗೆ ಬಂದಿದ್ದಾರೆ ಈ ವೇಳೆ ಪಂಪ್ ಮಾಲೀಕನನ್ನು ಅಪಹರಿಸಲು ಯತ್ನಿಸಿದ್ದಾರೆ ಆದರೆ ಅಲ್ಲಿನ ಸಿಬ್ಬಂಧಿಯ ಮಧ್ಯ ಪ್ರವೇಶದಿಂದ ಅಪಹರಣಕಾರರು ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆಯ ಎಲ್ಲಾ ದೃಶ್ಯಾವಳಿಗಳು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಪ್ರಕರಣದ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

ಇದನ್ನೂ ಓದಿ : ದಾವಣಗೆರೆ: ರೀಲ್ಸ್‌ ಮಾಡಲು ಹೋಗಿ ಇಬ್ಬರು ಯುವಕರು ನೀರುಪಾಲು

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next