Advertisement

ಪಿಎಫ್‍ಐ ನಿಷೇಧ ಅತ್ಯಂತ ಸಮರ್ಥ ನಿರ್ಧಾರ- ನಳಿನ್‍ಕುಮಾರ್ ಕಟೀಲ್

10:00 AM Sep 28, 2022 | Team Udayavani |

ಬೆಂಗಳೂರು: ವಿದೇಶಿ ದೇಣಿಗೆ ಮೂಲಕ ಸಮಾಜ ವಿದ್ರೋಹಿ ಕೆಲಸಗಳಲ್ಲಿ ತೊಡಗಿಕೊಂಡಿದ್ದ ಪಿಎಫ್‍ಐ ನಿಷೇಧ ಅತ್ಯಂತ ಸಮರ್ಥ ನಿರ್ಧಾರ ಮತ್ತು ಇದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದು, ಕೇಂದ್ರ ಸರಕಾರಕ್ಕೆ ಧನ್ಯವಾದ ಸಮರ್ಪಿಸಿದ್ದಾರೆ.

Advertisement

ಪಿಎಫ್‍ಐ ನಾಯಕರು ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹೊಂದಿದ್ದರು. ಕೇಂದ್ರ ಸರಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ, ಪಿಎಫ್‍ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು, ಐದು ವರ್ಷಗಳ ವರೆಗೆ ನಿಷೇಧಿಸಿದೆ. ಇದನ್ನು ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಕೋಮು ಸೌಹಾರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹಿನ್ನೆಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಮಾಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಅಲ್ಲದೆ, ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ. ಕೇಂದ್ರ ಸರಕಾರ ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿಷೇಧ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಭವಿಷ್ಯದಲ್ಲಿ ವಿದ್ರೋಹಿ ಹಾಗೂ ವಿಚ್ಛಿದ್ರಕಾರಿ ಮನಸ್ಥಿತಿಯ ಸಂಘಟನೆಗಳು ಸಮಾಜದ ಒಳಗಡೆ ರೂಪುಗೊಳ್ಳದಂತೆ ಎಚ್ಚರಿಕೆ ವಹಿಸಬೇಕು. ನಿಷೇಧದ ಸುತ್ತ ಯಾವ ರಾಜಕೀಯ ಪಕ್ಷವೂ ತುಷ್ಟೀಕರಣದ ಮತ್ತು ತಕ್ಷಣದ ರಾಜಕೀಯ ಲಾಭ ಪಡೆದುಕೊಳ್ಳುವ ಪ್ರಯತ್ನದ ರಾಜಕಾರಣ ಮಾಡಬಾರದು ಎಂದು ಅವರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಸಿದ್ದರಾಮಯ್ಯರ ನೇತೃತ್ವದ ಸರಕಾರವು ಇಂಥ ಸಮಾಜವಿದ್ರೋಹಿಗಳ ಮೇಲಿನ ಪ್ರಕರಣಗಳನ್ನು ರದ್ದು ಮಾಡಿ ಅವುಗಳ ಬೆಳವಣಿಗೆಗೆ ಸಹಕರಿಸಿತ್ತು. ಇದನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರವನ್ನು ಮುಂದಿನ ದಿನಗಳಲ್ಲಿ ಕೊಡುವುದು ಖಚಿತ ಎಂದು ನಳಿನ್‍ಕುಮಾರ್ ಕಟೀಲ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next