ಲಕ್ನೊ: ಉತ್ತರ ಪ್ರದೇಶದ ಉಗ್ರ ನಿಗ್ರಹ ದಳ (ಎಟಿಎಸ್)ದ ಪೊಲೀಸರು ರವಿವಾರ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಜತೆಗೆ ಸಂಪರ್ಕ ಇರಿಸಿಕೊಂಡಿದ್ದ ಆರೋಪದ ಮೇಲೆ ವಾರಾಣಸಿಯಿಂದ ಇಬ್ಬರನ್ನು ಬಂಧಿಸಿದ್ದಾರೆ.
Advertisement
ಬಂಧಿತರನ್ನು ಪರ್ವೇಜ್ ಅಹ್ಮದ್ ಮತ್ತು ರಯೀಸ್ ಅಹ್ಮದ್ ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಅಕ್ರಮ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ)ಯ ಅಡಿಯಲ್ಲಿ 2022ರಲ್ಲಿ ಪ್ರಕರಣ ದಾಖಲಾಗಿದ್ದು, ಅಲ್ಲಿಂದೀಚೆಗೆ ಇವರು ತಲೆಮರೆಸಿಕೊಂಡಿದ್ದರು. ಇವರ ಇರವಿನ ಬಗ್ಗೆ ಮಾಹಿತಿಗೆ ತಲಾ 50 ಸಾವಿರ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಎಟಿಎಸ್ ಮೂಲಗಳು ತಿಳಿಸಿವೆ.