ತಿರುವನಂತಪುರಂ: ಪಿಎಫ್‌ಐ ಕರೆ ನೀಡಿದ್ದ ಹರತಾಳದ ಸಂದರ್ಭದಲ್ಲಿ ರಾಜ್ಯದಲ್ಲಿ ನಡೆದ ಹಿಂಸಾಚಾರವನ್ನು ಪೂರ್ವಯೋಜಿತ ಘಟನೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಹೇಳಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳ ಸಂಘದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ಹಿಂಸಾಚಾರವನ್ನು ಖಂಡಿಸಿದ್ದು, ಇದು ರಾಜ್ಯದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳ ನಾಶಕ್ಕೆ ಕಾರಣವಾಗಿದೆ. ಅಪರಾಧಿಗಳನ್ನು ಬಿಡುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ : ನಾವು ಹೇಗೆ ವಿಶ್ವ ಆರ್ಥಿಕತೆ ಪಟ್ಟಿಯಲ್ಲಿ 5 ನೇ ಸ್ಥಾನ ಪಡೆದೆವು?: ಶಾ ಪ್ರಶ್ನೆ
”ಪಿಎಫ್‌ಐ ನೇತೃತ್ವದಲ್ಲಿ ನಿನ್ನೆ ನಡೆದ ಹರತಾಳದಲ್ಲಿ ಕೇರಳ ಪೂರ್ವಭಾವಿ ಹಿಂಸಾಚಾರಕ್ಕೆ ಸಾಕ್ಷಿಯಾಯಿತು.ಇದರಿಂದಾಗಿ ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ. ರಾಜ್ಯದ ಶಾಂತಿಯುತ ವಾತಾವರಣ ಹಾಳು ಮಾಡುವ ಪ್ರಯತ್ನ ಇದಾಗಿದ್ದು, ತಪ್ಪಿತಸ್ಥರನ್ನು ಬಿಡುವುದಿಲ್ಲ” ಎಂದರು.
ದೇಶಾದ್ಯಂತ ಏಕಕಾಲದಲ್ಲಿ ನಡೆದ ದಾಳಿಗಳಲ್ಲಿ, ಸೆಪ್ಟೆಂಬರ್ 22 ರಂದು ಎನ್ ಐಎ ನೇತೃತ್ವದ ಕಾರ್ಯಾಚರಣೆಯು ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸಿದ ಆರೋಪದ ಮೇಲೆ 11 ರಾಜ್ಯಗಳಲ್ಲಿ ಪಿಎಫ್ ಐ ನ 106 ಮಂದಿ ಕಾರ್ಯಕರ್ತರನ್ನು ಬಂಧಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಿಎಫ್‌ಐ ಸೆ. 23 ರಂದು ಕೇರಳದಲ್ಲಿ ಹರತಾಳಕ್ಕೆ ಕರೆ ನೀಡಿತ್ತು, ರಾಜ್ಯದಲ್ಲಿ ವ್ಯಾಪಕ ಹಿಂಸಾಚಾರ ನಡೆದಿತ್ತು.