Advertisement
ಮುಂದಿನ ಎರಡು ದಿನಗಳ ಕಾಲ ಸೆಕ್ಷನ್ 144ರನ್ವಯ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕಿನಾದ್ಯಂತ ನಿಷೇಧಾಜ್ಙೆ ಜಾರಿಗೊಳಿಸಲಾಗಿದೆ.
Related Articles
Advertisement
ಸೆಕ್ಷನ್ 144 ಹಿನ್ನಲೆಯಲ್ಲಿ ಪುತ್ತೂರು ಉಪವಿಭಾಗೀಯ ವ್ಯಾಪ್ತಿಯಲ್ಲಿ ಯಾವುದೇ ಪ್ರತಿಭಟನೆ, ಮೆರವಣಿಗೆ ,ಸಾರ್ವಜನಿಕ ಸಭೆ ನಡೆಸದಂತೆ ಎಚ್ಚರಿಸಲಾಗಿದೆ.
ಈ ಅವಧಿಯಲ್ಲಿ ಪುತ್ತೂರು ಉಪವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ ಬೀದಿ,ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ, ಮತ್ತು ಸರಕಾರಿ ಕಛೇರಿ ಸುತ್ತಮುತ್ತ ಗುಂಪು ಸೇರುವುದನ್ನು ನಿಷೇಧಿಸಿದೆ.
ಯಾವುದೇ ಆಯುಧ, ಕೊಡುಗೋಲು,ಖರ ಭರ್ಚಿ,ಗದೆ, ಕೋಲು,ಚೂರಿ ದೊಡ್ಡ ಅಥವಾ ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಯಾವುದೇ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ.
ಯಾವುದೇ ಸಾರ್ವಜನಿಕ ಮೆರವಣಿಗೆ, ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು. ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ.
ಸಾರ್ವಜನಿಕ ಕೋಮು ಸೌಹರ್ದಕ್ಕೆ ಧಕ್ಕೆ ಬರುವಂತಹ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು , ಸಂಸ್ಥೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಮಾಡುವುದು, ಪತ್ರಿಕೆಗಳ ಪ್ರಕಟಣೆ ಮಾಡುವುದು ಅಥವಾ ವಸ್ತುಗಳ ಪ್ರದರ್ಶನ, ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅವರಾಧ ಎಸಗುವ ಮತ್ತು ಪ್ರೇರೆಪಿಸುವ ಕ್ರಮವನ್ನು ನಿಷೇಧಿಸಿದೆ.