Advertisement
ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಎರಡೂ ಸಂಘಟನೆಗಳ ನಿಷೇಧ ಹಾಗೂ ನಿಯಂತ್ರಣ ನಿಟ್ಟಿನಲ್ಲಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ಕೇಂದ್ರ ಸರ್ಕಾರಕ್ಕೂ ಶೀಘ್ರ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು. ಬೆಂಗಳೂರು, ಮೈಸೂರು, ಮಂಗಳೂರು ಭಾಗದಲ್ಲಿ ಕಳೆದ ಎಂಟು ವರ್ಷಗಳಿಂದ ನಡೆದಿ ರುವ ಕೊಲೆ ಹಾಗೂ ಕೊಲೆ ಸಂಚು, ಕಾನೂನು ಸುವ್ಯವಸ್ಥೆ ಹಾಳು ಮಾಡಲು ವ್ಯವಸ್ಥಿತ ಪಿತೂರಿ ಪ್ರಕರಣಗಳು ರಾಜ್ಯದ ಜನತೆಯಲ್ಲಿ ಆತಂಕ ಮೂಡಿಸಿವೆ. ಹಿಂಸೆ ಹಾಗೂ ಭಯೋತ್ಪಾದಕ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ತಿಳಿಸಿದರು.
Related Articles
Advertisement
ಅಂತಿಮವಾಗಿ ರಾಜ್ಯ ಸರ್ಕಾರ ಸುಧಾಕರ್ ಅವರ ಒತ್ತಡಕ್ಕೆ ಮಣಿದು ವೈದ್ಯಕೀಯ ಕಾಲೇಜು ಹಾಗೂ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ 508 ಕೋಟಿ ರೂ.ಗಳ ಆಡಳಿತಾತ್ಮಕ ಅನುಮೋದನೆ ನೀಡಿದೆ.ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಹಿಂದೆಯೇ ಟೆಂಡರ್ ಕರೆಯಲು ನಿರ್ಧರಿಸಲಾಗಿತ್ತು.ಆದರೆ, ವೆಚ್ಚ 558 ಕೋಟಿ ರೂ.ಆಗಿತ್ತು. ಇದೀಗ ಆ ಮೊತ್ತವನ್ನು 508 ಕೋಟಿ ರೂ.ಗೆ ಇಳಿಸಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದ ನೂತನ ವೈದ್ಯಕೀಯ ಕಾಲೇಜುಗಳ ಪೈಕಿ ಹಾವೇರಿ ಹಾಗೂ ಯಾದಗಿರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣಕ್ಕೆ ತಲಾ 488.75 ಕೋಟಿ ರೂ.ವೆಚ್ಚದಲ್ಲಿ ಟೆಂಡರ್ ಕರೆಯಲು ಅನುಮೋದನೆ ನೀಡಲಾಗಿದೆ. ಎರಡೂ ಕಡೆ 100 ಸೀಟುಗಳಿಂದ 150 ಸೀಟುಗಳಿಗೆ ಹೆಚ್ಚಿಸಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ತಿಳಿಸಿದರು.
ಯೋಜನಾ ಸಮಿತಿಗೆ ಉಸ್ತುವಾರಿ ಸಚಿವರದ್ದೇ ನೇತೃತ್ವ: ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಯೋಜನಾ ಸಮಿತಿಗಳಿಗೆ ಇನ್ನು ಮುಂದೆ ಜಿಪಂ ಅಧ್ಯಕ್ಷರಿಗೆ ಸ್ಥಾನವಿಲ್ಲ. ಬದಲಾಗಿ ಜಿಲ್ಲಾ ಉಸ್ತುವಾರಿ ಸಚಿವರೇ ನೇತೃತ್ವ ವಹಿಸಲಿದ್ದಾರೆ. ಜಿಲ್ಲಾ ಯೋಜನಾ ಸಮಿತಿಗಳಿಗೆ ಜಿಪಂ ಅಧ್ಯಕ್ಷರನ್ನು ಬಿಟ್ಟು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಧ್ಯಕ್ಷಗಿರಿ ನೀಡಲು ಹಾಗೂ ಅದಕ್ಕೆ ಚುನಾವಣೆ ನಡೆಸದಿರಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.
ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಜಿಲ್ಲಾ ಯೋಜನಾ ಸಮಿತಿಗಳ ವ್ಯಾಪ್ತಿಗೆ ನಗರ ಸ್ಥಳೀಯ ಸಂಸ್ಥೆಗಳೂ ಬರುವುದರಿಂದ ಜಿಪಂ ಅಧ್ಯಕ್ಷರ ಬದಲಿಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಧ್ಯಕ್ಷ ಸ್ಥಾನ ನೀಡುವುದು ಸೂಕ್ತ ಎಂಬ ಅಭಿ ಪ್ರಾಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.
ಐಟಿಐ ಕೋರ್ಸ್‌ಗಳಿಗೆ ಶುಲ್ಕ ನಿಗದಿ: ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರಗಳಲ್ಲಿ (ಐಟಿಐ) ಕೋರ್ಸ್‌ಗಳಿಗೆ ಹೆಚ್ಚು ಶುಲ್ಕ ಕಟ್ಟಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಸರ್ಕಾರವೇ ಇದೀಗ ತಾಂತ್ರಿಕ ಕೋರ್ಸ್‌ಗಳಿಗೆ ನಗರ ಪ್ರದೇಶಗಳಲ್ಲಿ 11,500 ರೂ., ಗ್ರಾಮೀಣ ಭಾಗದಲ್ಲಿ 10,500 ರೂ., ತಾಂತ್ರಿಕ ರಹಿತ ಕೋರ್ಸ್‌ಗಳಿಗೆ ನಗರ ಭಾಗದಲ್ಲಿ 9,200 ರೂ., ಗ್ರಾಮೀಣ ಭಾಗದಲ್ಲಿ 8,400 ರೂ. ನಿಗದಿಪಡಿಸಲು ಸಂಪುಟ ಅನುಮೋದನೆ ನೀಡಿದೆ.
ಸಂಪುಟದ ಇತರ ತೀರ್ಮಾನಗಳು-ಕಾರವಾರದ 450 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೂ 300 ಹೆಚ್ಚುವರಿ ಹಾಸಿಗೆಗಳಿಗೆ ವಿಸ್ತರಿಸಲು 144 ಕೋಟಿ ರೂ. ಮೊತ್ತದ ಯೋಜನೆಗೆ ಒಪ್ಪಿಗೆ. -ಮೈಸೂರಿನ ಟಿಬಿ ಆಸ್ಪತ್ರೆ ಆವರಣದಲ್ಲಿ ಹೆಣ್ಣು ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕೆ 42ಕೋಟಿ ರೂ. -ವಿಜಯನಗರ ವೈದ್ಯಕೀಯ ಸಂಸ್ಥೆ ಆವರಣದಲ್ಲಿ ಉಪನ್ಯಾಸಕರ ಕೊಠಡಿಗಳಿಗೆ 40.50 ಕೋಟಿ ರೂ. -ಬೆಂಗಳೂರು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ 450 ಹಾಸಿಗೆಗಳ ಹೊಸ ಆಸ್ಪತ್ರೆಗೆ 132.31 ಕೋಟಿ ರೂ. -ಮೈಸೂರು ವೈದ್ಯಕೀಯ ಕಾಲೇಜು ಆವರಣದಲ್ಲಿ ಹಾಸ್ಟೆಲ್‌ಗೆ
42 ಕೋಟಿ ರೂ. -ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಮೂಲಸೌಕರ್ಯಕ್ಕೆ 20 ಕೋಟಿ ರೂ. -ಕಲುಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಆವರಣದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಶಾಖೆ ಸ್ಥಾಪನೆಗೆ 150 ಕೋಟಿ ರೂ.ಬಿಡುಗಡೆಗೆ ಒಪ್ಪಿಗೆ. ಉತ್ತರ ಪ್ರದೇಶದಲ್ಲಿ ಈಗಾಗಲೇ ಇಂತಹ ಸಂಘಟನೆಗಳ ವಿರುದ್ಧ ಕ್ರಮಕ್ಕೆ ಅಲ್ಲಿನ ಸರ್ಕಾರ ಮುಂದಾಗಿದೆ. ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರವು ಕ್ರಮ ಕೈಗೊಳ್ಳಲಿದೆ. ಯಾವುದೇ ಸಂಘಟನೆಯನ್ನು ನಿಷೇಧಿಸುವ ಮುನ್ನ ಕೆಲವು ಪ್ರಕ್ರಿಯೆ ನಡೆಸಬೇಕಾಗುತ್ತದೆ. ಆ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದೆ.
-ಬಸವರಾಜ ಬೊಮ್ಮಾಯಿ, ಗೃಹ ಸಚಿವ