ನವದೆಹಲಿ:ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಬುಧವಾರ (ಜೂನ್ 1) ದಿಂದ ಅನ್ವಯವಾಗುವಂತೆ 135 ರೂಪಾಯಿಯಷ್ಟು ಇಳಿಕೆ ಮಾಡಲಾಗಿದೆ ಎಂದು ತೈಲ ಮಾರಾಟ ಕಂಪನಿಗಳು ಘೋಷಿಸಿವೆ.
ಇದನ್ನೂ ಓದಿ:6ನೇ ತರಗತಿಯಿಂದಲೇ ಹೆಣ್ಣು ಮಕ್ಕಳಿಗೆ ಕರಾಟೆ ಅಭ್ಯಾಸಕ್ಕೆ ಚಿಂತನೆ: ಸಚಿವ ಕೋಟ
ಇಂದಿನಿಂದ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 135 ರೂಪಾಯಿ ಇಳಿಕೆಯಾಗಿದ್ದು, ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 2,300 ರೂಪಾಯಿಗೆ ಇಳಿಕೆಯಾಗಿದೆ.
ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ ಇದೀಗ 2,219 ರೂಪಾಯಿಗೆ ಇಳಿಕೆಯಾಗಿದ್ದು, ಈ ಮೊದಲು ಪ್ರತಿ ಸಿಲಿಂಡರ್ ಬೆಲೆ 2,354ರೂಪಾಯಿಯಲ್ಲಿ ಮಾರಾಟ ಮಾಡಲಾಗುತ್ತಿತ್ತು.
ಕೋಲ್ಕತಾದಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 2,454 ರೂಪಾಯಿಯಿಂದ 2,322 ರೂಪಾಯಿಗೆ ಇಳಿದಿದೆ. ವಾಣಿಜ್ಯ ನಗರಿ ಮುಂಬಯಿಯಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 2,306 ರೂ.ನಿಂದ 2,171.50 ರೂಪಾಯಿಗೆ ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಬೆಂಗಳೂರಿನಲ್ಲಿ 14.2 ಕೆಜಿ ಎಲ್ ಪಿಜಿ ಸಿಲಿಂಡರ್ ದರ 1.006 ರೂಪಾಯಿಯಷ್ಟಿದೆ.