Advertisement

PG ದಂತ ವೈದ್ಯ: ಆ.3ರಿಂದ 2ನೇ ಸುತ್ತಿನ ಸೀಟು ಹಂಚಿಕೆ

09:36 PM Jul 31, 2024 | Team Udayavani |

ಬೆಂಗಳೂರು: ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್‌ನ 2ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆ. 3ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ಯ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ತಿಳಿಸಿದ್ದಾರೆ.

Advertisement

ಎರಡನೇ ಸುತ್ತಿನ ಸೀಟು ಹಂಚಿಕೆಗೆ ಆ. 3ರಂದು ಸೀಟ್‌ ಮ್ಯಾಟ್ರಿಕ್ಸ್‌ ಪ್ರಕಟಿಸಲಾಗುತ್ತದೆ. ಆ. 4ರಿಂದ 6ರ ವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಸಮಯ ನೀಡಲಾಗುತ್ತದೆ. ಆ.7ರಂದು ಸೀಟು ಹಂಚಿಕೆಯ ತಾತ್ಕಾಲಿಕ ಫ‌ಲಿತಾಂಶ ಹಾಗೂ ಆ. 8ರಂದು ಅಂತಿಮ ಫ‌ಲಿತಾಂಶ ಪ್ರಕಟಿಸಲಾಗುತ್ತದೆ.

ಅನಂತರ ಪ್ರವೇಶ ಪತ್ರ ಡೌನ್‌ ಲೋಡ್‌ ಮಾಡಿಕೊಂಡು ಶುಲ್ಕ ಪಾವತಿಸಲು ಹಾಗೂ ಕಾಲೇಜಿಗೆ ವರದಿ ಮಾಡಿಕೊಳ್ಳಲು ಆ. 13 ಕೊನೆ ದಿನ ಎಂದು ಅವರು ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next