Advertisement
ಮಂಗಳೂರಿಗೆ ಹೊರ ಜಿಲ್ಲೆ ಮತ್ತು ದೇಶ, ವಿದೇಶಗಳಿಂದ ವಿದ್ಯಾರ್ಥಿಗಳು ಮತ್ತು ಜನರು ಬಂದು ಹಾಸ್ಟೆಲ್, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್ ಮೆಂಟ್ ಮತ್ತು ಶಿಕ್ಷಣ ಸಂಸ್ಥೆಗಳ ವಸತಿಗೃಹಗಳಲ್ಲಿ ವಾಸ್ತವ್ಯವಿರುತ್ತಾರೆ. ಇತ್ತೀಚೆಗೆ ಡ್ರಗ್ಸ್ ಮಾಫಿಯಾ ಮತ್ತು ಇತರ ಕಾನೂನುಬಾಹಿರ ಚಟುವಟಿಕೆ ಗಳು ಹೆಚ್ಚುತ್ತಿವೆ. ಅವುಗಳನ್ನು ನಿಯಂತ್ರಣಕ್ಕೆ ತರಲು ಈ ಆದೇಶ ಹೊರಡಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಹಾಸ್ಟೆಲ್, ಪೇಯಿಂಗ್ ಗೆಸ್ಟ್ ಗಳಲ್ಲಿ ಸಿಸಿ ಟಿವಿ ಕೆಮರಾ ಅಳವಡಿಸ ಬೇಕು. ಒಂದು ಸಿಸಿ ಕೆಮರಾವನ್ನು ಮುಖ್ಯ ಪ್ರವೇಶ ದ್ವಾರಕ್ಕೆ ರಸ್ತೆಗೆ ಮುಖ ಮಾಡಿ ಅಳವಡಿಸಬೇಕು. ಇವುಗಳ ಫೂಟೇಜ್ ಕನಿಷ್ಠ 30 ದಿನಗಳ ಅವಧಿಗೆ ವೀಕ್ಷಣೆಗೆ ಲಭ್ಯವಿರು ವಂತೆ ಡಿವಿಆರ್‌ಗಳಲ್ಲಿ ಶೇಖರವಾಗಿರಬೇಕು.
ನಿಯಮ ಅನುಸರಿಸದಿದ್ದರೆ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಕಮಿಷನರ್ ತಿಳಿಸಿದ್ದಾರೆ. ಆದೇಶದಲ್ಲೇನಿದೆ?
* ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಹಾಸ್ಟೆಲ್, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್‌ಮೆಂಟ್ ಮತ್ತು ಶಿಕ್ಷಣ ಸಂಸ್ಥೆಗಳ ವಸತಿ ಗೃಹಗಳ ಮಾಲಕರು, ಪಾಲುದಾರರು ಮತ್ತು ಆಡಳಿತ ಮಂಡಳಿಯವರು ಕಡ್ಡಾಯವಾಗಿ ಸಂಬಂಧಿಸಿದ ಇಲಾಖೆಗಳಿಂದ ಅನುಮತಿ ಪಡೆಯಬೇಕು.
* ಹಾಸ್ಟೆಲ್, ಪೇಯಿಂಗ್ ಗೆಸ್ಟ್ ಮಾಲಕರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ಸಲ್ಲಿಸಬೇಕು.
* ವಾಸ್ತವ್ಯವಿರುವ ವಿದ್ಯಾರ್ಥಿಗಳ ಹೆಸರು, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ಪೊಲೀಸ್ ಠಾಣೆಗೆ ನೀಡಬೇಕು.
*ವಿದೇಶದ ವಿದ್ಯಾರ್ಥಿಗಳಾಗಿದ್ದಲ್ಲಿ ಅವರು ವಾಸ್ತವ್ಯಕ್ಕೆ ಬಂದ 15 ದಿನಗಳೊಳಗೆ ಪೂರ್ಣ ಮಾಹಿತಿಯೊಂದಿಗೆ ಪಾಸ್ ಪೋರ್ಟ್, ವೀಸಾ ವಿವರಗಳನ್ನು ಠಾಣೆಗೆ ಸಲ್ಲಿಸಬೇಕು. ವಾಸ್ತವ್ಯ ತೆರವುಗೊಳಿಸದಿದ್ದರೆ ಅದರ ವಿವರವನ್ನೂ ಆಯಾ ಠಾಣಾಧಿಕಾರಿಗೆ ಸಲ್ಲಿಸಬೇಕು.
* ಹಾಸ್ಟೆಲ್, ಪೇಯಿಂಗ್ ಗೆಸ್ಟ್ ಮಾಲಕರು ಅಪರಿಚಿತರ ಪ್ರವೇಶ ನಿಯಂತ್ರಿಸಲು ಸೂಕ್ತ ವ್ಯವಸ್ಥೆಯನ್ನು ಮಾಡಬೇಕು.
* ಅಪರಾಧ ಕೃತ್ಯಗಳು, ಕಾನೂನುಬಾಹಿರ ಚಟುವಟಿಕೆಗಳು, ಅನೈತಿಕ ಚಟುವಟಿಕೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು.