Advertisement
ನಗರದ ತಾಲೂಕು ಕಚೇರಿಯಲ್ಲಿ ಫೋನ್‌ಇನ್ ಕಾರ್ಯಕ್ರಮದಲ್ಲಿ ಕರೆಗಳನ್ನು ಸ್ವೀಕರಿಸಿ ಮಾತ ನಾಡಿದ ಅವರು, ಕಂದಾಯ ಇಲಾಖೆಯನ್ನು ಜನ ಸ್ನೇಹಿ ಮಾಡುವ ಸಲುವಾಗಿ ಅನೇಕ ಕಾರ್ಯಕ್ರಮ ಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗು ತ್ತದೆ.
Related Articles
Advertisement
ಬಚ್ಚಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ರಸ್ತೆಯಿಲ್ಲ ಎಂಬ ದೂರಿಗೆ ಸ್ಪಂದಿಸಿದ ತಾಲೂಕು ದಂಡಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಬೇಕೆಂದು ರಾಜಸ್ವ ನಿರೀಕ್ಷಕರಿಗೆ ಸೂಚನೆ ನೀಡಿದರು
ಕೆ.ಕೆ.ಪೇಟೆಯಿಂದ ಕರೆ ಮಾಡಿದ ನಾಗರಿಕರಿಬ್ಬರು ಮನೆಯೊಂದರ ಜಾಗ ಒತ್ತುವರಿ ಮಾಡಿಕೊಂಡಿ ದ್ದಾರೆ. ಅದನ್ನು ತೆರವುಗೊಳಿಸಬೇಕೆಂದು ಮನವಿ ಮಾಡಿದರು. ಮತ್ತೂಂದೆಡೆ ಕದಿರಿಪಾಳ್ಯದ ವೆಂಕಟೇಶ್ ಎಂಬುವರು 22 ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ .ಇದರಿಂದ ಕೂಲಿಕಾರ್ಮಿಕರಿಗೆ ಸಮಸ್ಯೆಯಾಗಿದೆ ಎಂದು ದೂರು ಸಲ್ಲಿಸಿದರು. ನಗರಸಭೆಯ ಪೌರಾಯುಕ್ತರು ಈ ಸಮಸ್ಯೆ ಬಗೆಹರಿಸಬೇಕಾಗಿದೆ. ಆದರೂ ಸಹ ತಾವು ನಗರಸಭೆಯ ಅಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುವುದಾಗಿ ಹೇಳಿದರು.
ಶಿಡ್ಲಘಟ್ಟ ನಗರ ಪ್ರದೇಶದಲ್ಲಿ ಆಧಾರ್ ನೋಂದಣಿ ಕೇಂದ್ರ ಆರಂಭಿಸಲು ಮತ್ತು ವಾರ್ಡ್ ಮಟ್ಟದಲ್ಲಿ ಪಿಂಚಣಿ ಅದಾಲತ್ ನಡೆಸಬೇಕೆಂದು ಕರ್ನಾಟಕ ವಿಶ್ವನಿರ್ಮಾಣ ಸೇನೆಯ ಪದಾಧಿಕಾರಿ ಬಾಬುಹುಸೇನ್ ಮನವಿಗೆ ಸ್ಪಂದಿಸಿದ ತಾಲೂಕು ದಂಡಾಧಿಕಾರಿಗಳು, ತಾಲೂಕು ಕಚೇರಿಯಲ್ಲಿ ಆಧಾರ್ ನೋಂದಣಿ ಕೇಂದ್ರ ಆರಂಭಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.
ತಹಶೀಲ್ದಾರ್ ಗ್ರೇಡ್-2 ಹನುಮಂತರಾವ್, ಉಪ ತಹಶೀಲ್ದಾರ್ ಮಂಜುನಾಥ್, ಕಸಬಾ ರಾಜಸ್ವ ನಿರೀಕ್ಷಕ ವಿಶ್ವನಾಥ್, ಶಿರಸ್ತೇದಾರ ಮಂಜುನಾಥ್, ಗ್ರಾಮ ಲೆಕ್ಕಾಧಿಕಾರಿ ಪ್ರೀತಂ, ಆಹಾರ ನಿರೀಕ್ಷಕ ನಾರಾಯಣಸ್ವಾಮಿ, ಜಂಗಮಕೋಟೆ ಹೋಬಳಿ ರಾಜಸ್ವ ನಿರೀಕ್ಷಕ ಸುಪ್ರೀತ್, ಬಶೆಟ್ಟಿಹಳ್ಳಿ ಹೋಬಳಿ ರಾಜಸ್ವ ನಿರೀಕ್ಷಕ ನರಸಿಂಹಮೂರ್ತಿ ಉಪಸ್ಥಿತರಿದ್ದರು.