Advertisement
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಉಪ ಮುಖ್ಯ ಮಂತ್ರಿ ಡಾ| ಜಿ. ಪರಮೇಶ್ವರ್, ಮಾಜಿ ಸಚಿವ ಆರ್.ವಿ. ದೇಶಪಾಂಡೆ ಸಹಿತ ಕಾಂಗ್ರೆಸ್ ನಾಯಕರೇ ಪ್ರಕರಣದ ತನಿಖೆಗೆ ಒತ್ತಾಯಿಸುತ್ತಿರುವುದರಿಂದ ಒಂದು ರೀತಿಯಲ್ಲಿ ಸಮ್ಮಿಶ್ರ ಸರಕಾರದ ನಾಯಕತ್ವ ವಹಿಸಿದ್ದ ಜೆಡಿಎಸ್‌ಗೆ ಇರಿಸು ಮುರಿಸು ಉಂಟು ಮಾಡಿದೆ.
ಆದರೆ ಸರಕಾರದ ಮೂಲಗಳ ಪ್ರಕಾರ ಪ್ರಕರಣ ಇಲ್ಲಿಗೆ ಮುಕ್ತಾಯ ಮಾಡಲು ತೀರ್ಮಾನ ಮಾಡಲಾಗಿದೆ. ತೀರಾ ಒತ್ತಾಯ ಬಂದರೆ ಮಾತ್ರ ತನಿಖೆಗೆ ಒಪ್ಪಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
Related Articles
ಸಮ್ಮಿಶ್ರ ಸರಕಾರದಲ್ಲಿ ಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡಿದ್ದ ಡಿ.ಕೆ. ಶಿವಕುಮಾರ್ ತಮ್ಮ ಪಕ್ಷದ ನಾಯಕರ ಹೇಳಿಕೆಗಳಿಗೆ ವಿರುದ್ಧವಾಗಿ ಹಿಂದಿನ ಸರಕಾರದಲ್ಲಿ ದೂರವಾಣಿ ಕದ್ದಾಲಿಕೆ ಆಗಿಲ್ಲ. ಬಿಜೆಪಿಯವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Advertisement
ಹಿಂದೆ ಸರಿದ ಆಲೋಕ್ ದೂರವಾಣಿ ಕದ್ದಾಲಿಕೆ ಪ್ರಕರಣ ಬಹಿರಂಗಗೊಳ್ಳಲು ಕಾರಣವಾದ ವಿಚಾರದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ತನಿಖೆಗೆ ಆದೇಶಿಸಿದ್ದರು. ಆದರೆ ತನಿಖೆಗೆ ನೇಮಕಗೊಂಡಿದ್ದ ಅಧಿಕಾರಿ ಹಿಂದೆ ಸರಿದಿದ್ದರು. ಇದರ ನಡುವೆ ಪೊಲೀಸ್ ಆಯುಕ್ತರ ಸ್ಥಾನದಿಂದ ತಮ್ಮನ್ನು ವರ್ಗಾವಣೆ ಮಾಡಿದ ಬಗ್ಗೆ ಸಿಎಟಿಗೆ ಮೊರೆ ಹೋಗಿದ್ದ ಆಲೋಕ್ ಕುಮಾರ್ ಅವರು ಅರ್ಜಿ ವಾಪಸ್ ಪಡೆದಿದ್ದಾರೆ. ಇದೆಲ್ಲವೂ ಪ್ರಕರಣ ತಣ್ಣಗಾಗಿಸುವ ಪ್ರಯತ್ನ ಎಂದು ಹೇಳಲಾಗುತ್ತಿದೆ.