Advertisement

ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಮನೆ ಮೇಲೆ ಸಿಬಿಐ ದಾಳಿ, ಪೆನ್ ಡ್ರೈವ್ ಗೆ ಶೋಧ?

10:02 AM Sep 27, 2019 | Nagendra Trasi |

ಬೆಂಗಳೂರು: ರಾಜಕಾರಣಿಗಳು, ಜನಪ್ರತಿನಿಧಿಗಳು, ಐಪಿಎಸ್ ಅಧಿಕಾರಿಗಳ ದೂರವಾಣಿ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಮನೆ ಮೇಲೆ ಗುರುವಾರ ಸಿಬಿಐ ದಾಳಿ ನಡೆಸಿದ್ದು, ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

ಹಿಂದಿನ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರ ಮನೆಯಲ್ಲಿ ಕದ್ದಾಲಿಕೆ ಆಡಿಯೋ ರೆಕಾರ್ಡ್ ಗೆ ಸಂಬಂಧಿಸಿದ ಪೆನ್ ಡ್ರೈವ್ ಗಾಗಿ ಸಿಬಿಐ ಶೋಧ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಬೆಳ್ಳಂಬೆಳಗ್ಗೆ ಅಲೋಕ್ ಕುಮಾರ್ ನಿವಾಸದ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿರುವ ಜತೆಗೆ ದೂರವಾಣಿ ಕದ್ದಾಲಿಕೆ ಪ್ರಕರಣದ ಕುರಿತಂತೆ ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿ ವಿವರಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next