ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಈ ಚಂಡಮಾರುತದಿಂದಾಗಿ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು ಹಾಗೂ ಒಡಿಶಾಗೆ ಅಲರ್ಟ್ ಆಗಿರುವಂತೆ ಸೂಚಿಸಲಾಗಿದ್ದು, ಮಧ್ಯಮ ಪ್ರಮಾಣದಿಂದ ತೀವ್ರ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದಾಗಿದೆ. ಎ. 30ರಂದು 70 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ. ಅಷ್ಟೇ ಅಲ್ಲ, ಭೂಕುಸಿತ ಸಂಭವಿಸಬಹುದಾದ ಪ್ರದೇಶಗಳಿಗೆ ತೆರಳದಂತೆಯೂ ನಾಗರಿಕರಿಗೆ ಸೂಚಿಸಲಾಗಿದೆ. ಈ ನಡುವೆ, ಮಾರ್ಚ್‌ನಿಂದ ಎಪ್ರಿಲ್‌ವರೆಗಿನ ಅವಧಿಯಲ್ಲಿ ಮುಂಗಾರು ಪೂರ್ವ ಮಳೆಯ ಪ್ರಮಾಣ ಶೇ. 27ರಷ್ಟು ಕುಂಠಿತ ವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement