Advertisement

ಸ್ವಾತಂತ್ರ್ಯ ಸೇನಾನಿಗಳ ಛಾಯಾಚಿತ್ರ ಪ್ರದರ್ಶನ

02:10 PM Sep 18, 2022 | Team Udayavani |

ಬೀದರ: ನಗರದ ಕರ್ನಾಟಕ ಕಾಲೇಜು ಆವರಣದಲ್ಲಿ ಭಾರತ ಸರ್ಕಾರದ ಕೇಂದ್ರ ಸಂವಹನ ಶಾಖೆ ಕಲಬುರಗಿ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪೋಷಣ್‌ ಮಾಸ ಹಿನ್ನೆಲೆ ಮೂರು ದಿನಗಳ ಛಾಯಾಚಿತ್ರ ಪ್ರದರ್ಶನಕ್ಕೆ ಶನಿವಾರ ಚಾಲನೆ ನೀಡಲಾಯಿತು.

Advertisement

ಕೆಆರ್‌ಇ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಬಿ.ಜಿ. ಶೆಟಕಾರ ಮಾತನಾಡಿ, ಈ ಭಾಗದ ಸ್ವಾತಂತ್ರ್ಯ ಸೇನಾನಿಗಳ ಕುರಿತು ಛಾಯಾಚಿತ್ರ ಏರ್ಪಡಿಸಿರುವುದು ಸಂತಸದ ವಿಷಯವಾಗಿದೆ. ಇದರಿಂದ ನಮ್ಮ ಭಾಗದ ಸ್ವಾತಂತ್ರ್ಯ ಹೋರಾಟಗಾರರ ನೆನಪುಗಳು ನಮಗೆ ಮರುಕಳಿಸುತ್ತವೆ. ವಿಮೋಚನೆಗಾಗಿ ಅನೇಕ ಹಿರಿಯರು ತಮ್ಮ ಪ್ರಾಣ ತ್ಯಾಗ ಮಾಡಿದ್ದು, ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಪ್ರಾಂಶುಪಾಲ ಬಸವರಾಜ ಬಲ್ಲೂರ ಮಾತನಾಡಿ, ಹೈ-ಕ ನಿಜಾಮರ ಆಳ್ವಿಕೆಯಿಂದ ಮುಕ್ತಿಯಾಗಲು ಸರ್ದಾರ ವಲ್ಲಭಭಾಯಿ ಪಟೇಲರ ನೇತೃತ್ವದಲ್ಲಿ ವಿಮೋಚನೆಯಾಯಿತು. ಈ ಸ್ವಾತಂತ್ರ್ಯವನ್ನು ಇಂದು ನಾವೆಲ್ಲರೂ ಸೇರಿ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ಇದರ ಇತಿಹಾಸವನ್ನು ನಮ್ಮ ಯುವ ಪೀಳಿಗೆ ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದರು.

ಕ್ಷೇತ್ರ ಪ್ರಚಾರ ಅಧಿಕಾರಿ ಶ್ರುತಿ ಎಸ್‌.ಟಿ. ಮಾತನಾಡಿ, ಪ್ರಧಾನಿ ಮೋದಿ ಅವರ ಆಶಯದೊಂದಿಗೆ ಸ್ಥಳೀಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ನೆನಪಿಸುವ ಸಲುವಾಗಿ ಇಂತಹ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮಗಳನ್ನು ಭಾರತದಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಇದನ್ನು ವೀಕ್ಷಿಸಬಹುದಾಗಿದೆ ಎಂದು ಹೇಳಿದರು.

ಛಾಯಾಚಿತ್ರ ವೀಕ್ಷಣೆ: ವಿಧಾನ ಪರಿಷತ್‌ ಸಭಾಪತಿ ರಘುನಾಥರಾವ ಮಲ್ಕಾಪುರೆ, ಶಾಸಕ ರಹೀಮ ಖಾನ್‌, ಕೆಎಸ್‌ಐಐಡಿಸಿ ಅಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ, ರಾಜ್ಯ ಹಜ್‌ ಸಮಿತಿ ಅಧ್ಯಕ್ಷ ರವೂಫುದ್ಧಿನ್‌ ಕಚೇರಿವಾಲೆ, ಬಿಡಿಎ ಅಧ್ಯಕ್ಷ ಬಾಬು ವಾಲಿ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಸಿಇಒ ಶಿಲ್ಪಾ ಎಂ., ಎಸ್‌ಪಿ ಕಿಶೋರ್‌ ಬಾಬು, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಸಹಾಯಕ ಆಯುಕ್ತ ಮೊಹ್ಮದ ನಯೀಮ್‌ ಮೋಮಿನ್‌ ಮತ್ತಿತರರು ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿದರು.

Advertisement

ಪ್ರಾಚಾರ್ಯ ಡಾ| ಎಂ.ಎಸ್‌. ಚೆಲ್ವಾ, ಕೆಆರ್‌ಇ ಸಂಸ್ಥೆಯ ಸಿದ್ರಾಮ ಪಾರಾ, ಡಾ| ಬಸವರಾಜ ಪಾಟೀಲ ಅಷೂuರ, ಸತೀಶ ಪಾಟೀಲ, ಅಧಿಕಾರಿಗಳಾದ ನಾಗಪ್ಪ ಅಂಬರಗೋಳ, ಮುರಳಿಧರ ಕಾರಬಾರಿ ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next