Advertisement

ಮೈಸೂರು ಅರಮನೆಯಲ್ಲಿ ಫೋಟೋ ತೆಗೆಯಲು ಅವಕಾಶ: ಮಾಧುಸ್ವಾಮಿ

09:53 PM Sep 04, 2021 | Team Udayavani |

ಬೆಂಗಳೂರು: ಮೈಸೂರು ಅರಮನೆ ವ್ಯಾಪ್ತಿಯಲ್ಲಿ ಫ್ಲ್ಯಾಶ್‌ ಬಳಸದೆ ಫೋಟೊ ತೆಗೆಯಲು ಅವಕಾಶ ಇದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

Advertisement

ಈ ಕುರಿತು ಸಚಿವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2016ರಲ್ಲಿ ಭಾರೀ ಸುದ್ದಿಯಾಗಿದ್ದ ಮೈಸೂರು ಅರಮನೆ ಒಳಾಂಗಣ ಮತ್ತು ಹೊರಾಂಗಣದಲ್ಲಿ ಚಿತ್ರೀಕರಣ ಪ್ರಕರಣವನ್ನು ಸಂಪುಟ ಸಭೆ ಕೈಬಿಟ್ಟಿದೆ.

ಚಿತ್ರೀಕರಣಕ್ಕೆ ಅನುಮತಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್‌. ಸುಬ್ರಹ್ಮಣ್ಯ ವಿರುದ್ಧ ಉಪ ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಕಲಂ 12(3)ರಡಿ ಶಿಫಾರಸು ಮಾಡಿದ್ದರು. ಆದರೆ, ಅರಮನೆ ಮೈದಾನದಲ್ಲಿ ಫ್ಲ್ಯಾಶ್‌ ಬಳಸದೆ ಶೂಟಿಂಗ್‌ ಮಾಡಲು ಆಡಳಿತ ಮಂಡಳಿ ಅನುಮತಿ ನೀಡಿತ್ತು. ಹೀಗಾಗಿ ಇದರಲ್ಲಿ ಅಧಿಕಾರಿಯ ತಪ್ಪಿಲ್ಲ ಎಂದು ಪ್ರಕರಣ ಕೈಬಿಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಪೊಲೀಸರ ಕರ್ತವ್ಯ ಅತಿ ಕ್ಲಿಷ್ಟಕರ : ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಷಾದ

Advertisement

Udayavani is now on Telegram. Click here to join our channel and stay updated with the latest news.

Next