ಜೇವರ್ಗಿ: ಭಾರತದ ಮೊಟ್ಟ ಮೊದಲ ಶಿಕ್ಷಕಿ, ದಣಿವರಿಯದ ಸತ್ಯಶೋಧಕಿ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿಬಾಯಿ ಫುಲೆ ಕೊಡುಗೆ ಅಪಾರವಾಗಿದೆ ಎಂದು ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ ಹೇಳಿದರು.
ಪಟ್ಟಣದ ಹಳೆಯ ತಹಶೀಲ್ ಕಚೇರಿ ಆವರಣದಲ್ಲಿ ಶನಿವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಆಯೋಜಿಸಲಾದ ತಾಲೂಕು ಮಟ್ಟದ ಮಹಿಳಾ ದಿನಾಚರಣೆ ಹಾಗೂ ಮಾತೆ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘದ 2ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಾವಿತ್ರಿಬಾಯಿ ಫುಲೆ ಅವರ ಯಶಸ್ಸು, ಶ್ರೇಯಸ್ಸಿನ ವಿಕ್ರಮ ಪಾಲು ಜ್ಯೋತಿಬಾ ಫುಲೆ ಅವರದ್ದಾಗಿತ್ತು. ಸ್ತ್ರೀ ಶಿಕ್ಷಣವನ್ನು ತೆರೆದ ಕೀರ್ತಿ ಜ್ಯೋತಿಬಾ ಫುಲೆ ಅವರಿಗೆ ಸಲ್ಲುತ್ತದೆ ಎಂದರು. ಮೈತ್ರೀಯಾ ಆಮ್ಲಾನ ಬಿಸ್ವಾಸ್ ಉದ್ಘಾಟಿಸಿದರು.
ಶೋಭಾ ಬಾಣಿ, ಅಂಜನಾ ರಾಠೊಡ, ಗುರುಬಾಯಿ ಪಾಟೀಲ, ಸಿಡಿಪಿಒ ಪಾಪಮ್ಮ, ರೇಣುಕಾ ಹಿರೇಗೌಡರ್ ಆಗಮಿಸಿದ್ದರು. ರಾಷ್ಟ್ರಪ್ರಶಸ್ತಿ ವಿಜೇತೆ ಅಕ್ಕಮ್ಮ ಹರವಾಳ, ಯುಗಾಂತರಿ ದೇಶಮಾನೆ, ಚಂದಮ್ಮ ಗೋಳಾ, ಅಪೂರ್ವ ಕೋಣಿನ್,
ಗ್ರಾಮೀಣ ಭಾಗದಲ್ಲಿ ಸಾರಾಯಿ ನಿಷೇಧಕ್ಕೆ ಹೋರಾಡಿದ ಸ್ತ್ರೀ ಶಕ್ತಿ ಸಂಘಗಳನ್ನು ಹಾಗೂ ಎಸ್ ಎಸ್‌ಎಲ್‌ಸಿ, ಪಿಯುಸಿ, ಸ್ನಾತ್ತಕೋತ್ತರ ಪದವಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.