ಬೆಂಗಳೂರು: ರಾಜ್ಯದಲ್ಲಿ ಪಿಕ್ ಪಾಕೆಟ್ ಸರ್ಕಾರ ಇದೆ ಎಂದು ಆರೋಪಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, 10 ರೂ. ಮದ್ಯವನ್ನು 70 ರೂ.ಗೆ ಮಾರಾಟ ಮಾಡಿ ಕುಡಕರ ಜೇಬಿನಿಂದ ಪಿಕ್ ಪಾಕೆಟ್ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿ, ಮದ್ಯದ ಮೇಲೆ ಮನ ಬಂದಂತೆ ತೆರಿಗೆ ಹಾಕಿರುವ ರಾಜ್ಯ ಸರ್ಕಾರ ಆ ಹಣದಲ್ಲಿ ಅನ್ನಭಾಗ್ಯ, ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದೆ ಎಂದು ಹೇಳಿದ್ದಾರೆ. ಕುಡುಕರ ಜೇಬಿನಿಂದ ಪಿಕ್ ಪಾಕೆಟ್ ಮಾಡುತ್ತಿರುವ ಸರ್ಕಾರ, ಕಳೆದ ನಾಲ್ಕು ವರ್ಷಗಳಲ್ಲಿ 1.28 ಲಕ್ಷ ಕೋಟಿ ಸಾಲ ಮಾಡಿ ದಿವಾಳಿತನ ಪ್ರದರ್ಶಿಸಿದೆ ಎಂದು ಲೇವಡಿ ಮಾಡಿದರು. ಸರ್ಕಾರಿ ಕಾರ್ಯಕ್ರಮಗಳಿಗೆ ವರ್ಷಕ್ಕೆ 500 ಕೋಟಿ ರೂ. ಜಾಹೀರಾತು ನೀಡುತ್ತಿದ್ದಾರೆ. ಇದರ ಅಗತ್ಯವಿದೆಯಾ ಎಂದು ಪ್ರಶ್ನಿಸಿದರು.
ಉತ್ತರ ಕರ್ನಾಟಕ ನೆನಪು: ನಾಲ್ಕೂವರೆ ವರ್ಷದ ಬಳಿಕ ಸಿಎಂ ಸಿದ್ದರಾಮಯ್ಯ ಉತ್ತರ ಕರ್ನಾಟಕ ಪ್ರವಾಸ ಪ್ರಾರಂಭಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ ಅವರಿಗೆ ಉತ್ತರ ಕರ್ನಾಟಕ ನೆನಪಾಗಿದೆ. ಭಟ್ಕಳದಲ್ಲಿ 1,500 ಕೋಟಿ ರೂ. ಅಭಿವೃದಿಟಛಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜಿಲ್ಲಾಡಳಿತದಿಂದಲೇ ಕಾರ್ಯಕ್ರಮ ಆಯೋಜನೆಗೆ ನೂರಾರು ಕೋಟಿ ರೂ. ಟೆಂಡರ್ ಕರೆದಿದ್ದಾರೆ. ದೇಶದಲ್ಲೇ ಈ ರೀತಿ ಹಿಂದೆಂದೂ ನಡೆದಿಲ್ಲ ಎಂದು ದೂರಿದರು.
ಕಾರ್ಯಾಧ್ಯಕ್ಷರಿಗೆ ಬಂಡಾಯ ಬಿಸಿ: ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ, ಕಾಂಗ್ರೆಸ್ ಶಾಸಕರು ಇಲ್ಲದ ಕಡೆ ಕೆಪಿಸಿಸಿ ಅಧ್ಯಕ್ಷರ ಪ್ರವಾಸ, ಬಂಡಾಯ ಬಿಸಿ ಇರುವ ಕಡೆ ಪಾಪ ಕಾರ್ಯಾಧ್ಯಕ್ಷರ ಪ್ರವಾಸ ತುಂಬಾ ಚೆನ್ನಾಗಿದೆ ಎಂದು ಕೆಣಕಿದರು.
ಬಿಜೆಪಿ ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಬನ್ನಿ ಎಂದು ಯಾರಿಗೂ ನಾನು ಆಹ್ವಾನ ಕೊಟ್ಟಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಲು ಯಾರಾದ್ರೂ ಕೈಜೋಡಿಸಲು ಬಂದರೆ ಸ್ವಾಗತಿಸುತ್ತೇನೆ. ನಾನಾಗಿ ಯಾರನ್ನೂ ಹುಡುಕಿಕೊಂಡು ಮನೆ ಬಾಗಿಲಿಗೂ ಹೋಗಲ್ಲ. ಪಕ್ಷ ಬಿಟ್ಟು ಹೋಗುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಡಬಲ್ ಗೇಮ್
ರಾಜಕಾರಣ ಸಹಿಸುವುದಿಲ್ಲ.
– ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ