Advertisement

Road Mishap; ಪಿಕ್ ಅಪ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಸಾವು

09:45 PM Dec 01, 2023 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಪಿಕ್ ಅಪ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಶಿಂಡನಪುರ ಗ್ರಾಮದ ಬಳಿ ರಾಜ್ಯ ಹೆದ್ದಾರಿ 81 ರಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

Advertisement

ತಾಲೂಕಿನ ಕಡತಾಳಕಟ್ಟೆಹುಂಡಿ (ಮೂಡಲಹುಂಡಿ) ಗ್ರಾಮದ ಮಹೇಂದ್ರ(37) ಮೃತರು.

ಈತ ಗುಂಡ್ಲುಪೇಟೆ ಯಲ್ಲಿ ವೈಯಕ್ತಿಕ ಕೆಲಸ ಮುಗಿಸಿ ಊರಿಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ತೆರಕಣಾಂಬಿ ಕಡೆಯಿಂದ ಬಾಳೆ ಕಾಯಿ ತುಂಬಿದ್ದ ಪಿಕ್ ಅಪ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಬೈಕ್ ಸವಾರನಿಗೆ ಕಾಲು ಮುರಿದು, ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ಕುರಿತು ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಗುಂಡ್ಲುಪೇಟೆ ಠಾಣೆ ಪೊಲೀಸರು ಮೃತದೇಹವನ್ನು ತುರ್ತು ಚಿಕಿತ್ಸಾ ವಾಹನದಲ್ಲಿ ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದರು.

Advertisement

ಘಟನೆ ಸಂಬಂಧ ಪಿಕ್ ಅಪ್ ಮತ್ತು ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next