Advertisement

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

01:46 AM May 19, 2024 | Team Udayavani |

ಕಾಪು: ಇಲ್ಲಿನ ಕೊಪ್ಪಲಂಗಡಿಯಲ್ಲಿ ರಸ್ತೆ ಬದಿ ನಿಂತಿದ್ದ ಟಿಪ್ಪರ್‌ಗೆ ಪಿಕಪ್‌ ವಾಹನ ಹಿಂದಿನಿಂದ ಢಿಕ್ಕಿ ಹೊಡೆದ ಘಟನೆ ಶನಿವಾರ ಸಂಜೆ ನಡೆದಿದೆ.

Advertisement

ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಪಿಕಪ್‌ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಟಿಪ್ಪರ್‌ನ ಹಿಂಬದಿಗೆ ಢಿಕ್ಕಿ ಹೊಡೆದಿದ್ದು ಪಿಕಪ್‌ ಚಾಲಕ ಮಂಗಳೂರಿನ ಲತೇಶ್‌ ತೀವ್ರವಾಗಿ ಗಾಯಗೊಂಡರು.

ಢಿಕ್ಕಿ ಹೊಡೆದ ಪರಿಣಾಮ ಪಿಕಪ್‌ ಸಂಪೂರ್ಣ ನಜ್ಜುಗುಜ್ಜಾಗಿದ್ದು ಗಂಭೀರ ಗಾಯಗೊಂಡ ಪಿಕಪ್‌ ಚಾಲಕನನ್ನು ಸ್ಥಳೀಯರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಪು ಎಸ್‌ಐ ಅಬ್ದುಲ್‌ ಖಾದರ್‌ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next