Advertisement
ನನ್ನ ಗೆಳತಿಯ ವ್ಯಾನಿಟಿ ಬ್ಯಾಗ್ ಅನ್ನು ಸಕಾರಣವೊಂದಕ್ಕೆ ನಾನು ನೋಡಬೇಕಾಯಿತು. ಅಲ್ಲಿ ಹತ್ತಾರು ಚೀಟಿಗಳು ಮುದುಡಿಕೊಂಡಿದ್ದವು. ಅದು ಅವರ ಮನೆಯ ಕರೆಂಟು ಬಿಲ್‌ಗಳಲ್ಲ, ಆಕೆಗೆ ಯಾರೋ ಬರೆದ ಪ್ರೇಮಪತ್ರಗಳೂ ಆಗಿರಲಿಲ್ಲ, ಅವು ಕೇವಲ ಲೆಕ್ಕಪತ್ರಗಳಷ್ಟೇ. ಅವಳ ಕೈಯಲ್ಲಿಯೇ ಬರೆದ ಲೆಕ್ಕದ ಚೀಟಿಗಳವು. ಒಂದರಲ್ಲಿ ಕೇಸರಿಬಾತ್-5 ಪ್ಲೇಟ್, ಚಹಾ-3, ಕಾಫಿ- 2 ಅಂತ ಬರೆದಿದ್ದರೆ, ಮತ್ತೂಂದರಲ್ಲಿ ಚಕ್ಕುಲಿ-ಬಿಸ್ಕತ್ತು-ಎರಡೆರಡು ಪ್ಯಾಕ್, ಕಾಫಿ 6, ಚಹಾ 2 ಎಂದು ಬರೆದಿತ್ತು. ಮತ್ತೂಂದರಲ್ಲಿ ಮೈಸೂರುಪಾಕ್-10, ಖಾರಾ- 1 ಕಿಲೋ, ಹಾಲು-2 ಪ್ಯಾಕ್, ಚಹಾ-6 ಎಂದು ಬರೆಯಲಾಗಿತ್ತು. ಹಾಗೆ ಸುಮಾರು, ಹತ್ತಕ್ಕೂ ಅಧಿಕ ಚೀಟಿಗಳಿದ್ದವು.
Related Articles
Advertisement
ಇವೆಲ್ಲದರ ನಡುವೆ ಜಾತಕ ನೋಡುವ ಪ್ರಹಸನ ಕೂಡ ಒಂದು ಕಾಲಹರಣದ ಸಂಗತಿ. ಹತ್ತಾರು “ಗಂಡುಗಳು’ ಬಂದು, ಚೆನ್ನಾಗಿ ತಿಂದು ನಗುತ್ತಲೇ ಹೋಗುತ್ತಾರೆ. “ಊರಿಗೆ ಹೋಗಿ ಫೋನ್ ಮಾಡ್ತೇವೆ’ ಎಂದು ಸೌಜನ್ಯದಿಂದಲೇ ಹೇಳುವ ಜನ ಆನಂತರದಲ್ಲಿ ಉಗುಳು ನುಂಗುತ್ತಾ, “”ನಮಗೇನೋ ಸಂಬಂಧ ಇಷ್ಟ ಆಯ್ತು, ಆದರೆ ಜಾತಕ ಹೊಂದುತ್ತಿಲ್ಲ”, “”ಹುಡುಗಿ ಕೊಂಚ ದಪ್ಪಗಾದಳು”, “”ಈ ಸಂಬಂಧ ಬೆಳೆಸಲು ನಮ್ಮ ಮನೆ ದೇವರು ಅಪ್ಪಣೆ ನೀಡಲಿಲ್ಲ…” ಎಂಬ ಬಣ್ಣ ಬಣ್ಣದ ಸಬೂಬು ಹೇಳಿ ನುಣುಚಿಕೊಳ್ಳುತ್ತಾರೆ. ಹಾಗೆ ಜಾತಕಗಳ ಝೆರಾಕ್ಸ್‌ಗೆ ಹತ್ತಿಪ್ಪತ್ತು ರೂಪಾಯಿ ಖೋತಾ!
ಇವೆಲ್ಲ ಬೆಳವಣಿಗೆಗಳನ್ನು ಕಂಡು, ಹುಡುಗಿ ಹಾಗೂ ಅವಳ ಪೋಷಕರು ಕಂಗಾಲಾಗುವುದು ಸಹಜ. ಒಂದು ಸಂಬಂಧ ಮುರಿದುಬಿದ್ದಿತೆಂದರೆ, ಆ ಹುಡುಗಿಯನ್ನು ನೋಡುವ ದೃಷ್ಟಿಕೋನವೇ ಬದಲಾಗುತ್ತದೆ. ಅವಳಲ್ಲೇ ಏನೋ ದೋಷವಿದೆ ಅನ್ನುವ ಅಪವಾದವನ್ನು ಹೊರಿಸುವ ಪ್ರಳಯಾಂತಕರೂ ನಮ್ಮ ಸುತ್ತಮುತ್ತ ಇದ್ದಾರೆ.
ಹೀಗಿದ್ದರೂ ಹುಡುಗಿ ಮತ್ತವಳ ಮನೆಯ ಕಡೆಯವರು ಸುಮ್ಮನೇ ಚಿಂತಿಸುತ್ತಾ ಕೂರುವಂತಿಲ್ಲ. ಇಂದಲ್ಲ ನಾಳೆ ಕಂಕಣಬಲ ಕೂಡಿ ಬರುತ್ತದೆ ಎನ್ನುವ ಆಶಾವಾದವನ್ನು ಹೊತ್ತುಕೊಂಡೇ ತಿರುಗಬೇಕಾಗುತ್ತದೆ. ನೆಂಟರಿಷ್ಟರ ಚುಚ್ಚು ನುಡಿಗಳು, ಅಸಂಬದ್ಧ ಪ್ರಶ್ನೆಗಳನ್ನು ಸಹಿಸಿಕೊಳ್ಳಬೇಕಾಗುತ್ತದೆ. “ಎಷ್ಟು ಗಂಡುಗಳು ಬಂದರೂ, ಯಾರೂ ಯಾಕೆ ಒಪ್ಪಿಲ್ಲ? “ಸದ್ಯಕ್ಕೆ ಮದ್ವೆ ಮಾಡೋದಿಲ್ವೇ?’, “ಎಷ್ಟು ದಿನಾ ಅಂತ ಮನೇಲಿ ಇಟ್ಕೊàತಿರಾ?’- ಇಂಥ ಪ್ರಶ್ನೆಗಳ ದಾಳಿ ಯಾವಾಗಲೂ ಇದ್ದಿದ್ದೇ.
ಹುಡುಗಿಯನ್ನು ನೋಡಲು ಬರುವ ಗಂಡಿನ ತಾಯಿಯೂ ಹೆಣ್ಣೇ ಅಲ್ಲವೇ? ಮದುವೆಯ ಮುಂಚೆ ಆಕೆಯೂ ಒಬ್ಬ ತಂದೆಗೆ ಮಗಳಾಗಿದ್ದವಳೇ ಅಲ್ಲವೇ? ಆದರೂ ತನ್ನ ಮಗನಿಗೆ ಹೆಣ್ಣು ನೋಡುವ ಸಂದರ್ಭ ಬಂದಾಗ ಅವೆಲ್ಲವನ್ನೂ ಆಕೆ ಮರೆತುಬಿಡೋದು ಯಾಕೆ? ಮನೆಯಲ್ಲಿ ಮದುವೆಯಾಗದ ಹೆಣ್ಣಿದ್ದಾಳೆ ಎಂದಾಕ್ಷಣ, ಸುಮ್ಮನೇ ನೋಡಿ ಬಂದರಾಯಿತು ಎನ್ನುವ “ಪಿಕ್‌ನಿಕ್’ ಮನೋಭಾವವನ್ನು ಗಂಡಿನ ಮನೆಯವರು ಬಿಡಬೇಕು. ಹುಡುಗಿಯನ್ನು ನೋಡಲು ಹೋಗುವ ಮುನ್ನ ಹುಡುಗಿ ಬಗ್ಗೆ, ಅವಳ ಕುಟುಂಬದ ಬಗ್ಗೆ ನಾನಾ ಕಡೆಗಳಿಂದ ವಿವರಗಳನ್ನು ಕಲೆಹಾಕಿ ನಂತರವಷ್ಟೇ ಮುಂದಡಿಯಿಡಬೇಕು.
ಒಮ್ಮೊಮ್ಮೆ ತಂದೆತಾಯಿಗೆ ಒಪ್ಪಿಗೆಯಾಗಿದ್ದರೂ, ಉದ್ಯೋಗದಲ್ಲಿರುವ ಹಾಗೂ ವ್ಯಾವಹಾರಿಕ ಪ್ರಪಂಚದೊಡನೆ ಬದುಕುವ ಹುಡುಗನಿಗೆ ಮನೆಯಲ್ಲಿರುವ ಹುಡುಗಿ ಇಷ್ಟವಾಗುವುದಿಲ್ಲ. ಹಾಗಾಗಿ, ಬಾಳಸಂಗಾತಿಯಾಗಿ ಎಂಥ ಹುಡುಗಿ ಬೇಕು ಎಂಬುದನ್ನು ಗಂಡುಗಳು ಹೆತ್ತವರೊಂದಿಗೆ ಮೊದಲೇ ಚರ್ಚಿಸುವುದು ಒಳಿತು. ನೀವು ಬಯಸಿದಂಥ ಗುಣ, ಬಣ್ಣ, ಆರ್ಥಿಕ ಸಬಲತೆ ಬಗ್ಗೆ ಚೆಕ್ ಮಾಡಿ. ಎಲ್ಲವೂ ಹೊಂದಿಕೊಳ್ಳಬಹುದೆಂಬ ಭರವಸೆಯಿದ್ದಲ್ಲಿ ಮಾತ್ರ ಹುಡುಗಿ ನೋಡಲು ಹೋಗಿ.
ಸಂಗಾತಿಯ ಹುಡುಕಾಟ ಸುಲಭವಲ್ಲ, ಹಾಗೆಂದು ಹೆಣ್ಣು ಸಹ ಮಾರಾಟಕ್ಕಿಲ್ಲವಲ್ಲ… ಮದುವೆಯ ನಂತರ ಮನಃಸ್ಥಿತಿಯ ಹೊಂದಾಣಿಕೆಯ ಲೋಪದಲ್ಲಾಗುವ ಸಂಬಂಧಗಳ ಬಿರುಕಿಗೆ ಯಾರೂ ಹೊಣೆಯಲ್ಲ, ಅದು, ಗಂಡು-ಹೆಣ್ಣಿನಲ್ಲಿರಬೇಕಾದ ಅರಿವು ಮತ್ತು ಬದುಕುವ ಸಾಮರ್ಥ್ಯದ ಮೇಲೆ ನಿರ್ಧಾರವಾಗುವ ವಿಚಾರ. ಬಂದವರ ಮುಂದೆಲ್ಲಾ ನಿಂತು ಹೋಗಲು ಹೆಣ್ಣು ಶೋಕೇಸ್‌ನಲ್ಲಿ ಇಡುವ ಗೊಂಬೆಯಲ್ಲವಲ್ಲ !
ಪೂಜಾ ಎಚ್. ವಿ.