ನವದೆಹಲಿ: ಒಡಿಶಾದ ಬಾಲಸೋರ್ ಸಂಭವಿಸಿದ ರೈಲು ಅಪಘಾತದ ಕುರಿತು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ತಜ್ಞರ ಸಮಿತಿಯಿಂದ ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಸಾರ್ವಜನಿಕರ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಭವಿಷ್ಯದಲ್ಲಿ ಇಂತಹ ದುರಂತಗಳು ಸಂಭವಿಸದಂತೆ ತಡೆಯಲು ರಕ್ಷಾಕವಚವನ್ನು ಜಾರಿಗೆ ತರುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಒಡಿಶಾ ರೈಲು ಅಪಘಾತದಲ್ಲಿ ಇಲ್ಲಿಯವರೆಗೆ 288 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ಸಾವಿರಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಧಾನಿ ಮೋದಿ ಮತ್ತು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ಘಟನಾಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು ಹಾಗೂ ಆಸ್ಪತ್ರೆಗೆ ಭೇಟಿ ನೀಡಿದ್ದರು.