ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಕ್ಕೆ ಸಂಬಂ ಧಿಸಿದಂತೆ ರಾಜ್ಯ ಹೈಕೋರ್ಟ್ ನ್ಯಾಯಾಧಿಧೀಶರು ನೀಡಿರುವ ನಿರ್ದೇಶನದಂತೆ ಮಾ. 1ರಂದು ಸೋಮವಾರ ಕರ್ನಾಟಕ ಜನಸೈನ್ಯ ಸಂಘಟನೆಯಿಂದ ಪುನಃ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಕೆ.ಎರ್ರಿಸ್ವಾಮಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿ ಸಿ ಐತಿಹಾಸಿಕ, ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿರುವ ಜಿಲ್ಲೆಯನ್ನು ಅಖಂಡವಾಗಿ ಮುಂದುವರಿಸಬೇಕು ಎಂದು ಸಂಘಟನೆಯಿಂದ ಫೆ. 5ರಂದು ಹೈಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ಫೆ. 12ರಂದು ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಅಭಯ್ ಎಸ್. ಓಕಾ ಮತ್ತು ಸಹ ನ್ಯಾಯಾ ಧೀಶ ಸಚಿನ್ ಶಂಕರ್ ಮಗುªಮ್ ಅವರ ವಿಭಾಗೀಯ ಪೀಠ, ಜಿಲ್ಲೆ ವಿಭಜನೆಗೆ ಸಂಬಂಧಿಸಿದಂತೆ ಸರ್ಕಾರ ಆಕ್ಷೇಪಣೆಗೆ ಆಹ್ವಾನಿಸಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ಮಧ್ಯ ಪ್ರವೇಶ ಮಾಡಲು ಬರುವುದಿಲ್ಲ. ಒಂದುವೇಳೆ ಜಿಲ್ಲೆಯನ್ನು ವಿಭಜನೆ ಮಾಡಿದಲ್ಲಿ ಆಗ ಸರ್ಕಾರದ ನಿರ್ಣಯವನ್ನು ಕಾನೂನಿನಡಿಯಲ್ಲಿ ಪ್ರಶ್ನಿಸಬಹುದು ಎಂದು ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಾ. 1ರಂದು ಸೋಮವಾರ ಪುನಃ ಹೈಕೊರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಂಘಟನೆಯಿಂದ ಸಲ್ಲಿಸಲಾಗುವುದು ಎಂದವರು ತಿಳಿಸಿದರು.
ಜಿಲ್ಲೆ ವಿಭಜನೆ ವಿರೋಧಿಸಿ ಸಂಘಟನೆಯಿಂದ ಫೆ. 5ರಂದು ಸಲ್ಲಿಸಿದ್ದ ಪಿಐಎಲ್ ಅರ್ಜಿಯಲ್ಲಿ ರಾಜ್ಯದಲ್ಲೇ ಬಳ್ಳಾರಿ ಜಿಲ್ಲೆ ಪ್ರಮುಖವಾಗಿದೆ. ವಿಜಯನಗರ ಸಾಮ್ರಾಜ್ಯ ಕಾಲದಿಂದಲೂ ಪ್ರಾಮುಖ್ಯತೆ ಹೊಂದಿದ್ದು, ಕಲ್ಯಾಣ ಕರ್ನಾಟಕ ಭಾಗಕ್ಕೆ ಒಳಪಟ್ಟಿದೆ. 11 ತಾಲೂಕುಗಳು ಇರುವ ಜಿಲ್ಲೆಯಲ್ಲಿ ಬಳ್ಳಾರಿ, ಹೊಸಪೇಟೆ, ಹರಪನಹಳ್ಳಿ ಮೂರು ಉಪ ವಿಭಾಗಗಳನ್ನು ಹೊಂದಿದೆ. ಶೇ. 75ರಷ್ಟು ಕೃಷಿಯೇ ಮುಖ್ಯ ಉದ್ಯೋಗವಾಗಿದ್ದು, ಶೇ. 64ರಷ್ಟು ನೀರಾವರಿ ಸೌಲಭ್ಯವನ್ನು ಹೊಂದಿದೆ ಸೇರಿ ಇನ್ನಿತರೆ ಅಂಶಗಳನ್ನು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿತ್ತು.
ಫೆ. 8ರಂದು ರಾಜ್ಯ ಸರ್ಕಾರ ಜಿಲ್ಲೆಯ ವಿಭಜನೆಯನ್ನು ಅಧಿಕೃತಗೊಳಿಸಿ ರಾಜ್ಯಪತ್ರದಲ್ಲಿ ಪ್ರಕಟಿಸಿತು. ಫೆ. 12ರಂದು ಅರ್ಜಿಯ ವಿಚಾರಣೆ ನಡೆದಿದ್ದು, ನ್ಯಾಯಾಧೀಶರು ಈ ರೀತಿ ನಿರ್ದೇಶನ ನೀಡಿದ್ದಾರೆ. ಅದರಂತೆ ಮಾ. 1ರಂದು ಸರ್ಕಾರದ ಆದೇಶವನ್ನು ಪ್ರಶ್ನಿಸಿ ಮತ್ತೂಂದು ಪಿಐಎಲ್ ಸಲ್ಲಿಸಲಾಗುವುದು. ಇನ್ನಿತರೆ ಸಂಘಟನೆಗಳೂ ಪಿಐಎಲ್ ಸಲ್ಲಿಸಬಹುದು ಎಂದವರು ಕೋರಿದ್ದಾರೆ. ಸಂಘಟನೆಯ ಚೆಂಚಯ್ಯ, ಫಯಾಜ್ ಸೇರಿ ಹಲವರು ಇದ್ದರು.