Advertisement
ಸರಕಾರದ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಪಿಲಿಕುಳದ ಜೈವಿಕ ಉದ್ಯಾನ, ಲೇಕ್ ಗಾರ್ಡನ್, ಸಂಸ್ಕೃತಿ ಗ್ರಾಮ, ಆಬೋìರೇಟಮ್ ಮತ್ತು ಗುತ್ತು ಮನೆಯ ಆಕರ್ಷಣೆಗಳನ್ನು ಮಾತ್ರ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು. ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳಿಗೆ ಸಾರ್ವಜನಿಕ ಪ್ರವೇಶ ಸದ್ಯಕ್ಕಿಲ್ಲ.
ಸಾರ್ವಜನಿಕರು ನಿಸರ್ಗಧಾಮದ ಆಕರ್ಷಣೆ ಗಳನ್ನು ವೀಕ್ಷಿಸುವಾಗ ಕನಿಷ್ಠ 6 ಅಡಿ ಭೌತಿಕ ಅಂತರ ವನ್ನು ಕಾಯ್ದುಕೊಳ್ಳಬೇಕು. ಮುಖಗವಸು (ಮಾಸ್ಕ್) ಧಾರಣೆ ಕಡ್ಡಾಯ. ಎಲ್ಲರನ್ನೂ ಥರ್ಮಲ್ ಸ್ಕ್ರೀನಿಂಗ್ ಮೂಲಕ ತಪಾಸಣೆ ಮಾಡಲಾಗುವುದು. ದೇಹದ ಉಷ್ಣತೆ ಮಿತಿಗಿಂತ ಹೆಚ್ಚಿದ್ದರೆ, ಜ್ವರ, ಕೆಮ್ಮು, ಶೀತ, ಗಂಟಲು ನೋವು ಅಥವಾ ಉಸಿರಾಟದ ತೊಂದರೆ ಕಂಡುಬಂದರೆ ಅಂತಹ ವ್ಯಕ್ತಿಗಳಿಗೆ ಪ್ರವೇಶ ನಿರಾಕರಿಸಲಾಗುವುದು. ಕೊಳದಲ್ಲಿ ಮಕ್ಕಳ ಆಟಕ್ಕೆ ಅವಕಾಶವಿಲ್ಲ ಎಂದು ಪಿಲಿಕುಳದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.