Advertisement
“ಪಿಲಿಕುಳ ನಿಸರ್ಗಧಾಮಕ್ಕೆ ಅಳಿವಿನ ಭೀತಿ’ ಎಂಬ ಶೀರ್ಷಿಕೆಯಲ್ಲಿ ಆ. 25ರಂದು “ಉದಯವಾಣಿ’ಯು ಮೃಗಾಲಯದ ಆರ್ಥಿಕ ಸಂಕಷ್ಟದ ಬಗ್ಗೆ ವರದಿ ಪ್ರಕಟಿಸಿತ್ತು. ಒಂದು ವರ್ಷದಿಂದ ಎಂಆರ್‌ಪಿಎಲ್ ಸಂಸ್ಥೆಯು ಮೃಗಾಲಯದ ನಿರ್ವಹಣೆಯನ್ನು ನೋಡಿಕೊಳ್ಳುತ್ತಿದ್ದು, ಮುಂದಿನ 2 ತಿಂಗಳವರೆಗೆ ಇದು ಜಾರಿಯಲ್ಲಿರುವ ಬಗ್ಗೆ ಉಲ್ಲೇಖೀಸಲಾಗಿತ್ತು. ಇದೀಗ ಒಂದು ತಿಂಗಳು ಪೂರ್ಣಗೊಂಡಿದ್ದು, ಇನ್ನು ಒಂದು ತಿಂಗಳು ಮಾತ್ರ ನಿರ್ವಹಣೆ ಹೊಣೆ ಎಂಆರ್‌ಪಿಎಲ್‌ಗಿದೆ. ಆ ಬಳಿಕ ಏನು ಎಂಬ ಬಗ್ಗೆ ಸ್ಪಷ್ಟತೆ ಇರಲಿಲ್ಲ.
ಪಿಲಿಕುಳ ನಿಸರ್ಗಧಾಮದಲ್ಲಿ ವಿವಿಧ ಪ್ರಭೇದದ 1,200ಕ್ಕೂ ಅಧಿಕ ಪ್ರಾಣಿ, ಪಕ್ಷಿ ಹಾಗೂ ಉರಗಗಳಿವೆ. ಅವುಗಳ ಆಹಾರಕ್ಕೆ ಪ್ರತೀ ತಿಂಗಳು 12 ಲಕ್ಷ ರೂ.ಗಳಿಗೂ ಅಧಿಕ ವೆಚ್ಚ ಮಾಡಲಾಗುತ್ತದೆ. ಉಳಿದಂತೆ ಸಿಬಂದಿ ವೇತನ ಸೇರಿದಂತೆ ವಿವಿಧ ಕಾರಣಕ್ಕಾಗಿ ವೆಚ್ಚವಾಗುತ್ತಿದ್ದು, ಒಟ್ಟು ಸುಮಾರು 20 ಲಕ್ಷ ರೂ. ಪ್ರತೀ ತಿಂಗಳು ಅಗತ್ಯವಿದೆ. ಇಲ್ಲಿಯವರೆಗೆ ವಿವಿಧ ಕಂಪೆನಿಗಳ ಸಿಎಸ್‌ಆರ್ ನಿಧಿಯಿಂದ ಹಾಗೂ ಪ್ರವಾಸಿಗರಿಂದ ಸಂಗ್ರಹವಾಗುವ ಹಣದಿಂದ ಪಿಲಿಕುಳ ಮೃಗಾಲಯದ ನಿರ್ವಹಣೆ ಮಾಡಲಾಗುತ್ತಿತ್ತು. ಆದರೆ ಕೊರೊನಾ ಕಾರಣದಿಂದ ಪ್ರವಾಸಿಗರಿಲ್ಲದೆ ಪಿಲಿಕುಳದಲ್ಲಿ ಆರ್ಥಿಕ ಸಮಸ್ಯೆ ಎದುರಾಗಿತ್ತು.