Advertisement

Pilikula: ಇಂದು ಚಂದ್ರಯಾನ -3ರ ವೀಕ್ಷಣೆ

11:41 PM Aug 22, 2023 | Team Udayavani |

ಮಂಗಳೂರು: ಇಡೀ ದೇಶವು ಕಾತರದಿಂದ ನಿರೀಕ್ಷಿಸುತ್ತಿರುವ ಚಂದ್ರಯಾನ -3ರ ವಿಕ್ರಮ್‌ ಲ್ಯಾಂಡರ್‌ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಆ. 23ರಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ವ್ಯವಸ್ಥೆಯನ್ನು ಮಾಡುತ್ತಿದೆ.

Advertisement

ಸಂಜೆ 5.20ರಿಂದ 6.30 ಗಂಟೆಯವರೆಗೆ ಚಂದ್ರನ ಸನಿಹದಲ್ಲಿ ನಡೆಯುವ ಈ ಕೌತುಕವನ್ನು ವೀಕ್ಷಿಸಲು ಕೇಂದ್ರದ ಸಭಾಭವನದಲ್ಲಿ ದೊಡ್ಡ ಪರದೆಯ ಮೇಲೆ ನೇರ ಪ್ರಸಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಕೇಂದ್ರದ ಸಿಬಂದಿ ಇದರ ಬಗೆಗಿನ ಮಾಹಿತಿ ಹಾಗೂ ವೈಶಿಷ್ಟ್ಯಗಳನ್ನು ಆಸಕ್ತರಿಗೆ ವಿವರಿಸುವರು. ಇಂತಹ ಪ್ರಸಾರಕ್ಕೆ ವ್ಯವಸ್ಥೆಯಿರುವ ಎಲ್ಲ ಕಾಲೇಜು ಹಾಗೂ ವಿದ್ಯಾ ಸಂಸ್ಥೆಗಳು ನಮ್ಮ ವಿಜ್ಞಾನಿಗಳ ಈ ಸಾಧನೆಯ ನೇರ ಪ್ರಸಾರವನ್ನು ವೀಕ್ಷಿಸಲು ವ್ಯವಸ್ಥೆಯನ್ನು ಮಾಡಿ, ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬುವ ಪ್ರಯತ್ನ ಮಾಡುವಂತೆ ವಿನಂತಿಸಲಾಗಿದೆ.

ಪಿಪಿಸಿಯಲ್ಲಿ
ನೇರ ಪ್ರಸಾರ
ಉಡುಪಿ:ಪೂರ್ಣ ಪ್ರಜ್ಞ ಕಾಲೇಜಿನ ಭೌತಶಾಸ್ತ್ರ ವಿಭಾಗದಿಂದ ಚಂದ್ರಯಾನ-3ರ ಸೇಫ್ ಲ್ಯಾಂಡಿಂಗ್‌ ಕಾರ್ಯಕ್ರಮ ವೀಕ್ಷಣೆಗಾಗಿ ಆ. 23ರ ಸಂಜೆ 5.30ರಿಂದ ಕಾಲೇಜಿನ ಆವರಣದಲ್ಲಿ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next