ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ವ್ಯಾಪ್ತಿಯಲ್ಲಿ ವಿಮಾನ ಚಾಲನ ತರಬೇತಿ ಕೇಂದ್ರ ಆರಂಭಿಸಲು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಮ್ಮತಿಸಿದ್ದಾರೆ ಎಂದುಸಂಸದೀಯ ವ್ಯವಹಾರಗಳ ಸಚಿವ
ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.
ಕೇಂದ್ರ ಸ್ಥಾಪನೆಯಿಂದ ರಾಜ್ಯದ ಎರಡನೇ ರಾಜಧಾನಿಯಾಗಿ ಹೊರಹೊಮ್ಮುತ್ತಿರುವ ಹುಬ್ಬಳ್ಳಿಗೆ ಮತ್ತೂಂದು ಹಿರಿಮೆ ಸಿಕ್ಕಂತಾಗಲಿದೆ. ವಿಮಾನ ಪೈಲಟ್‌ಗಳ ಕೊರತೆ ನೀಗಿಸಲು ಆರು ವಿಮಾನ ತರಬೇತಿ ಸಂಸ್ಥೆಗಳನ್ನು ದೇಶಾದ್ಯಂತ ಕೇಂದ್ರ ಸರಕಾರ ಸ್ಥಾಪಿಸುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಯಾವುದೇ ಶಾಲೆಗಳು ಇಲ್ಲದಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಈ ತರಬೇತಿ ಕೇಂದ್ರ ತಲೆ ಎತ್ತಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಹಿಂದೂ ಮಹಿಳೆಯರ ಟಾರ್ಗೆಟ್ ಮಾಡುತ್ತಿದ್ದ ಜಾಲ ಬಯಲಿಗೆ
ಈ ಕುರಿತು ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿರುವ ಸಚಿವರು, ಈ ಹಿಂದಿನ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರದೀಪಸಿಂಗ್ ಪುರಿ ಹಾಗೂ ಈಗಿನ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರೊಂದಿಗೆ ಉತ್ತರ ಕರ್ನಾಟಕದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಮಾನ ಚಾಲನ ತರಬೇತಿ ಕೇಂದ್ರ ಸ್ಥಾಪಿಸಲು ಆಗ್ರಹಿಸಲಾಗಿತ್ತು. ಇದಕ್ಕೆ ಸಚಿವ ಜ್ಯೋತಿರಾದಿತ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಕೇಂದ್ರ ಸ್ಥಾಪನೆಯಿಂದ ಕೈಗಾರಿಕೋದ್ಯಮಕ್ಕೂ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.