Advertisement

ಪೈಲ್ವಾನ್‌ ಸಿನಿಮಾ ಪೈರಸಿ: ಸೈಬರ್‌ ಕ್ರೈಂ ಠಾಣೆಗೆ ದೂರು

10:51 PM Sep 16, 2019 | Lakshmi GovindaRaju |

ಬೆಂಗಳೂರು: ನಟ ಕಿಚ್ಚ ಸುದೀಪ್‌ ನಟನೆಯ ಪಂಚಭಾಷೆಗಳಲ್ಲಿ ತೆರೆಕಂಡಿದ್ದ “ಪೈಲ್ವಾನ್‌’ ಚಲನಚಿತ್ರವನ್ನು ಪೈರಸಿ ಮಾಡಿರುವ ಕಿಡಿಗೇಡಿಗಳು ಸಂಪೂರ್ಣ ಸಿನಿಮಾವನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಹಾಗೂ ಯುಟ್ಯೂಬ್‌ಗ ಹಾಕಿದ್ದಾರೆಂದು ಆರೋಪಿಸಿ ನಿರ್ಮಾಪಕಿ ಸ್ವಪ್ನ ಕೃಷ್ಣ ಸೋಮವಾರ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisement

ಕಳೆದ ಗುರುವಾರ ಪೈಲ್ವಾನ್‌ ಸಿನಿಮಾ ಐದು ಭಾಷೆಗಳಲ್ಲಿ ತೆರೆ ಕಂಡಿದ್ದು, ರಾಜ್ಯ ಹಾಗೂ ನೆರೆ ರಾಜ್ಯಗಳ ಸಾವಿರಾರು ಚಿತ್ರ ಮಂದಿರದಲ್ಲಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ತೆರೆಕಂಡ ಒಂದೆ ರಡು ದಿನಗಳಲ್ಲೇ ಕಿಡಿಗೇಡಿಗಳು ಚಿತ್ರವನ್ನು ಪೈರಸಿ ಮಾಡಿ ಸಾಮಾ ಜಿಕ ಜಾಲತಾಣಗಳಾದ ಫೇಸ್‌ಬುಕ್‌, ಯೂಟ್ಯೂಬ್‌ನಲ್ಲಿ ಹಾಕಿದ್ದು, ಅದರಿಂದ ಕೋಟ್ಯಂತರ ರೂ. ನಷ್ಟವಾಗಿದೆ ಎಂದು ಸ್ವಪ ಕೃಷ್ಣ ದೂರಿನಲ್ಲಿ ವಿವರಿಸಿದ್ದಾರೆ ಎಂದು ಸೈಬರ್‌ಕ್ರೈಂ ಪೊಲೀಸರು ಹೇಳಿದರು.

ಈ ಕುರಿತು ಪ್ರತಿಕ್ರಿಯೆ ನೀಡಿದ ನಿರ್ಮಾಪಕಿ ಸ್ವಪ್ನಕೃಷ್ಣ, “ಕನ್ನಡ ಚಿತ್ರರಂಗಕ್ಕೆ ಪೈರಸಿ ಒಂದು ಮಾರಕ. ಕಿಡಿಗೇಡಿಗಳು ಚಿತ್ರವನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅದರ ಸಾವಿರಾರು ಲಿಂಕ್‌ಗಳನ್ನು ಹರಿಬಿಟ್ಟಿದ್ದಾರೆ. ಸದ್ಯ 500 ಲಿಂಕ್‌ಗಳನ್ನು ಪೊಲೀಸರಿಗೆ ನೀಡಿ, ದೂರು ದಾಖಲಿಸಿದ್ದೇವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಪತ್ತೆ ಹಚ್ಚುವುದಾಗಿ ಭರವಸೆ ನೀಡಿದ್ದಾರೆ. ಈ ಕೃತ್ಯದ ಬಗ್ಗೆ ಯಾವುದೇ ನಿರ್ದಿಷ್ಟ ವ್ಯಕ್ತಿಗಳ ಮೇಲೆ ಅನುಮಾನ ಇಲ್ಲ’ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next