Advertisement
ಅವರು ಚಿಂಚಾÌಡ್‌ನ ಓಣಿಮಜಲು ಜಗನ್ನಾಥ ಶೆಟ್ಟಿ ಕಿರು ಸಭಾಗೃಹದಲ್ಲಿ ನಡೆದ ಪಿಂಪ್ರಿ ಚಿಂಚಾÌಡ್ ಬಂಟರ ಸಂಘದ ವಿದ್ಯಾರ್ಥಿ ಗಳಿಗೆ ಶೈಕ್ಷಣಿಕ ನಿಧಿ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತ ನಾಡಿ, ಮಕ್ಕಳನ್ನು ಹೆತ್ತವರು ಸಮಾಜದಲ್ಲಿನ ಪ್ರತಿಷ್ಠೆಗಾಗಿ ಒತ್ತಡವನ್ನು ಹೇರದೆ ಮಕ್ಕಳ ಆಸಕ್ತಿಯ ವಿಷಯಗಳಿಗೆ ಆದ್ಯತೆ ನೀಡಿ ಕ್ರಿಯಾ ಶೀಲರಾಗಿ ಸಂಸ್ಕಾರವಂತರಾಗಿ ಬಾಳುವಂತೆ ಪ್ರೇರೇಪಿಸಬೇಕಾಗಿದೆ. ವಿದ್ಯೆ ಒಂದು ಇಡೀ ಕುಟುಂಬದ ಏಳಿಗೆಗೆ ಕಾರಣವಾಗುತ್ತದೆ. ಇದನ್ನು ಮನಗಂಡು ಸಮಾಜದ ಅಭಿವೃದ್ಧಿಯ ಚಿಂತನೆಯೊಂದಿಗೆ ಪಿಂಪ್ರಿ-ಚಿಂಚಾÌಡ್ ಬಂಟರ ಸಂಘವು ಸಮಾಜದ ಬಡ ಮಕ್ಕಳನ್ನು ಗುರುತಿಸಿ ವಿದ್ಯಾವಂಚಿತರಾಗದೆ ಅವರ ಉಜ್ವಲ ಭವಿಷ್ಯವನ್ನು ಮನಗಂಡು ಶೈಕ್ಷಣಿಕ ನಿ ಧಿಯನ್ನು ನೀಡಿ ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿರುವುದು ಅಭಿನಂದನೀಯವಾಗಿದೆ. ಅದೇ ರೀತಿ ಮಕ್ಕಳಿಗೆ ತುಳು ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಕ್ತದಾನ ಶಿಬಿರ, ಮಹಿಳೆಯರಿಗೆ ಆರೋಗ್ಯ ಮಾಹಿತಿ ಶಿಬಿರಗಳನ್ನೂ ಹಮ್ಮಿಕೊಂಡು ಮಾದರಿ ಸಮಾಜ ಸೇವೆಯನ್ನು ಮಾಡುತ್ತಿರುವುದು ಸಂಘದ ಕಾರ್ಯತತ್ಪರತೆಯನ್ನು ಬಿಂಬಿ ಸುತ್ತದೆ. ಮಕ್ಕಳು ವಿದ್ಯಾವಂತರಾಗಿ, ಸಂಸ್ಕಾರ ವಂತರಾಗಿ ತಂದೆ-ತಾಯಂದಿರಿಗೆ, ಗುರು ಹಿರಿಯರಿಗೆ, ನೆರವಾದ ಸಂಘ ಸಂಸ್ಥೆಗಳಿಗೆ ವಿಧೇಯವಾಗಿರಬೇಕಾಗಿದೆ ಎಂದರು.
Related Articles
Advertisement
ಬೆಳಗ್ಗೆ ದುರ್ಗಾ ಟೆಕಿx ನಿಗಿx ಇಲ್ಲಿ ಪರಿಸರ ಸಂರಕ್ಷಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ, ಯುವ ವಿಭಾಗದ ವತಿಯಿಂದ ರಕ್ತದಾನ ಶಿಬಿರ, ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ಭಾಷಣ ಸ್ಪರ್ಧೆ, ಮಹಿಳಾ ಸದಸ್ಯರಿಗಾಗಿ ಖ್ಯಾತ ಕ್ಯಾನ್ಸರ್ ತಜ್ಞರಾದ ಡಾ| ಜೈಪಾಲ್ ರೆಡ್ಡಿಯವರಿಂದ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ಶಿಬಿರ ಮುಂತಾದ ಕಾರ್ಯಕ್ರಮಗಳು ನಡೆದವು. ಸಂಧ್ಯಾ ವಿ. ಶೆಟ್ಟಿ ಅವರನ್ನು ಸಂಘದ ವತಿಯಿಂದ ಶಾಲು ಹೊದೆಸಿ, ಸ್ಮರಣಿಕೆ ಪುಷ್ಪಗುತ್ಛ ನೀಡಿ ಸತ್ಕರಿಸಲಾಯಿತು.
ಸಂಘದ ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ. ಶೆಟ್ಟಿ ಮತ್ತು ಎರ್ಮಾಳ್ ಸೀತಾರಾಮ ಶೆಟ್ಟಿ ಮಕ್ಕಳ ಭಾಷಣ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದರು. ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸಂಘದ ಪದಾಧಿಕಾರಿಗಳು, ಯುವ ವಿಭಾಗ, ಮಹಿಳಾ ವಿಭಾಗದ ಸದಸ್ಯರು, ವಿದ್ಯಾರ್ಥಿಗಳು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಶ್ರೀನಿಧಿ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ| ವಿನಯ್ ಶೆಟ್ಟಿ ಸ್ವಾಗತಿಸಿ ಅಜಿತ್ ಶೆಟ್ಟಿ ವಂದಿಸಿದರು. ಅಧ್ಯಕ್ಷ ಮಹೇಶ್ ಹೆಗ್ಡೆ ಪ್ರಾಯೋಜಕತ್ವದಲ್ಲಿ ಬೆಳಗಿನ ಉಪಾಹಾರ ಹಾಗೂ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.
ಚಿತ್ರ-ವರದಿ :ಕಿರಣ್ ಬಿ. ರೈ ಕರ್ನೂರು.