Advertisement

ಪಿಂಪ್ರಿ-ಚಿಂಚ್ವಾಡ್‌ ಬಂಟರ ಸಂಘ ಪರಿಸರ ದಿನಾಚರಣೆ

12:07 PM Jun 29, 2018 | |

ಪುಣೆ:ಪಿಂಪ್ರಿ-ಚಿಂಚ್ವಾಡ್‌ ಬಂಟರ ಸಂಘದ ವತಿಯಿಂದ ದುರ್ಗಾ ಟೆಕ್ಡಿ ನಿಗ್ಡಿ ಇಲ್ಲಿ ಪರಿಸರ ಸಂರಕ್ಷಣೆಯ ಅಂಗವಾಗಿ ಗಿಡ ನೆಡಲಾಯಿತು.

Advertisement

ಸಂಘದ ಪದಾಧಿಕಾರಿಗಳು ದುರ್ಗಾ ಟೆಕ್‌ಡಿಗೆ ತೆರಳಿ ನೂರಾರು ಸಂಖ್ಯೆಯ ಗಿಡಗಳನ್ನು ನೆಟ್ಟರು. ಈ ಸಂದರ್ಭ ಸಂಘದ ಅಧ್ಯಕ್ಷ ಕಟ್ಟಿಂಗೇರಿಮನೆ ಮಹೇಶ್‌ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ದಿನೇಶ್‌ ಶೆಟ್ಟಿ ಬಜಗೋಳಿ, ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ. ಶೆಟ್ಟಿ, ಶಿಕ್ಷಣ ಮತ್ತು ಸಮಾಜಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷ ಡಾ| ವಿನಯ್‌ ಶೆಟ್ಟಿ ಕೆಂಜೂರು, ಯುವ ವಿಭಾಗದ ಕಾರ್ಯಾಧ್ಯಕ್ಷ ಅಜಿತ್‌ ಶೆಟ್ಟಿ ಮುಂಡ್ಕೂರು, ಮಾಜಿ ನಗರ ಸೇವಕರಾದ ಪ್ರಸಾದ್‌ ಶೆಟ್ಟಿ, ಸದಸ್ಯರುಗಳಾದ  ರಮೇಶ್‌ ಡಿ. ಶೆಟ್ಟಿ, ವಿಶ್ವನಾಥ್‌ ಶೆಟ್ಟಿ, ಅರುಣ್‌ ಶೆಟ್ಟಿ, ಚೇತನ್‌ ಶೆಟ್ಟಿ, ಪ್ರಭಾಕರ ಶೆಟ್ಟಿ ಮತ್ತು ಯುವ ವಿಭಾಗದ ಪದಾಧಿಕಾರಿಗಳು  ಭಾಗವಹಿಸಿದ್ದರು.

ನಂತರ ಓಣಿಮಜಲು ಜಗನ್ನಾಥ ಶೆಟ್ಟಿ ಕಿರು ಸಭಾಗೃಹದಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಹಾಗೂ ನೀರಿನ ಮಹತ್ವ ದ ಬಗ್ಗೆ ತುಳು ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. 

ಚಿತ್ರ-ವರದಿ: ಕಿರಣ್‌ ಬಿ. ರೈ ಕರ್ನೂರು

Advertisement

Udayavani is now on Telegram. Click here to join our channel and stay updated with the latest news.

Next