Advertisement
ತಾಲೂಕಿನ ಅರಕೆರೆ ಗ್ರಾಮದಲ್ಲಿ ಶನಿವಾರ ಗ್ರಾಮ ಪಂಚಾಯಿತಿ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. 2008ರಲ್ಲಿ ನಾನು ಮೊದಲ ಬಾರಿ ಶಾಸಕನಾದ ಸಂದರ್ಭದಲ್ಲಿ ಅರಕೆರೆಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಮಾಡಿದ್ದೆ. ಈಗ ಸರ್ಕಾರದ ಯೋಜನೆಯಂತೆ ಮನೆಗಳಿಗೆ ನೀರು ತಲುಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅರಕೆರೆ ಭಾಗದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು. ಇದಕ್ಕಾಗಿ 49 ಕೋಟಿ ರೂ. ಅನುದಾನ ಬಿಡುಗಡೆಗೆ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. ನ್ಯಾಮತಿ ಮತ್ತು ಹೊನ್ನಾಳಿ ತಾಲೂಕುಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ರಾಜ್ಯದಲ್ಲಿಯೇ ಅಭಿವೃದ್ಧಿ ಹೊಂದಿದ ತಾಲೂಕುಗಳನ್ನಾಗಿ ಮಾಡುವ ಮಹದಾಸೆ ನನ್ನದು ಎಂದರು.
Related Articles
Advertisement
ಗ್ರಾಮದ ಯುವ ಮುಖಂಡ ಅರಕೆರೆ ನಾಗರಾಜ್ ಮಾತನಾಡಿ, ರೇಣುಕಾಚಾರ್ಯರವರು ಶಾಸಕರಾದ ನಂತರ ನಮ್ಮ ಗ್ರಾಮ ಅಭಿವೃದ್ಧಿ ಸಾಧಿಸಿದೆ. ಗ್ರಾಮದ ತೋಟ, ಹೊಲ, ಗದ್ದೆಗಳಿಗೆ ಹೋಗಿ ಬರಲು ಸಿಮೆಂಟ್ ರಸ್ತೆಗಳಾಗಿವೆ. ಗ್ರಾಮಕ್ಕೆ 30 ಕೋಟಿ ರೂ. ಅನುದಾನದ ಕಾಮಗಾರಿಗಳು ಈಗಾಗಲೇ ನಡೆದಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ಹರಿದು ಬರಲಿದೆ ಎಂದರು.
ಜಿಪಂ ಸದಸ್ಯರಾದ ಎಂ.ಆರ್. ಮಹೇಶ್, ಸುರೇಂದ್ರ ನಾಯ್ಕ, ತಾಂಡಾ ಅಭಿವೃದ್ಧಿ ನಿಗಮದ ನಿರ್ದೇಶಕ ಮಾರುತಿ ನಾಯ್ಕ, ಎಪಿಎಂಸಿ ನಿರ್ದೇಶಕ ಜಿ.ವಿ. ರಾಜು, ತಾಪಂ ಇಒ ಎಸ್.ಎಲ್. ಗಂಗಾಧರಮೂರ್ತಿ ಇದ್ದರು.