ನವದೆಹಲಿ: ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡ ಬೆನ್ನಲ್ಲೇ ಭಾರತೀಯ ಜನತಾ ಪಕ್ಷ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ರಾಜ್ಯಸಭಾ ನಾಯಕರನ್ನಾಗಿ ಆಯ್ಕೆ ಮಾಡಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಯಾವುದು ಒಳ್ಳೆಯದು …ತೆಂಗಿನ ಎಣ್ಣೆಯನ್ನು ಚತುರವಾಗಿ ಉಪಯೋಗಿಸಿ
ಕರ್ನಾಟಕದಲ್ಲಿ ರಾಜ್ಯಪಾಲರಾಗಿದ್ದ ವಜುಭಾಯಿ ವಾಲಾ ಅವರ ಅಧಿಕಾರಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ರಾಜ್ಯದ 19ನೇ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
2010ರಿಂದ ರಾಜ್ಯಸಭಾ ಸದಸ್ಯರಾಗಿರುವ ಪಿಯೂಷ್ ಗೋಯಲ್ ಅವರು ಕೇಂದ್ರ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು. ಕಳೆದ ಎರಡು ವರ್ಷಗಳಲ್ಲಿ ಪಿಯೂಷ್ ಗೋಯಲ್ ಅವರು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮಾತ್ರವಲ್ಲ, ಬಿಜೆಡಿ, ಎಐಎಡಿಎಂಕೆಯಂತಹ ವಿಪಕ್ಷಗಳ ಜತೆ ಮಾತುಕತೆ ನಡೆಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂದು ವರದಿ ಹೇಳಿದೆ.
ರಾಜ್ಯಸಭಾ ನಾಯಕನ ಸ್ಥಾನಕ್ಕೆ ಕೇಂದ್ರ ಸಚಿವ, ವಕೀಲ ಭೂಪೇಂದ್ರ ಯಾದವ್ ಹೆಸರು ಕೂಡಾ ಚಾಲ್ತಿಯಲ್ಲಿತ್ತು. ಆದರೆ ಅಂತಿಮವಾಗಿ ಬಿಜೆಪಿ ಪಿಯೂಷ್ ಗೋಯಲ್ ಅವರನ್ನು ರಾಜ್ಯಸಭಾ ನಾಯಕರನ್ನಾಗಿ ಆಯ್ಕೆ ಮಾಡಿರುವುದಾಗಿ ವರದಿ ತಿಳಿಸಿದೆ.
ಕಾಂಗ್ರೆಸ್ ಪಕ್ಷದಲ್ಲಿಯೂ ಲೋಕಸಭೆಯಲ್ಲಿ ಪಕ್ಷದ ನಾಯಕರಾಗಿರುವ ಅಧೀರ್ ರಂಜನ್ ಚೌಧರಿಯನ್ನು ಕೂಡಾ ಬದಲಾಯಿಸಲು ರಾಹುಲ್ ಗಾಂಧಿ ಚಿಂತನೆ ನಡೆಸಿರುವುದಾಗಿ ಮೂಲಗಳು ಹೇಳಿವೆ.