Advertisement

ಸಹಕಾರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರ್ಯಯೋಜನೆ

01:07 AM Feb 27, 2020 | mahesh |

ಮಂಗಳೂರು: ಸಹಕಾರ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಸಹಕಾರಿಗಳಿಂದ ಸಲಹೆಗಳನ್ನು ಸ್ವೀಕರಿಸಿ ಸಮಗ್ರ ಅಭಿವೃದ್ಧಿಗೆ ಕಾರ್ಯ ಯೋಜನೆ ಹಾಕಿಕೊಳ್ಳಲಾಗುವುದು. ಸಲಹೆ ಗಳಿದ್ದರೆ ನನಗೆ ನೇರವಾಗಿ ಅಥವಾ ಶಾಸಕರ ಮೂಲಕ ಕಳುಹಿಸಿಕೊಡಬಹುದು ಎಂದು ರಾಜ್ಯ ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದರು.

Advertisement

ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಯನ್ನು ಬಲ ವರ್ಧನೆ ಮಾಡಲು ಎಲ್ಲ ಪ್ರಯತ್ನಗಳನ್ನು ನಡೆಸ ಲಿದ್ದು, ಈ ಬಗ್ಗೆ ಶೀಘ್ರದಲ್ಲೇ ಎಪಿಎಂಸಿ ವ್ಯಾಪ್ತಿಗೆ ಸೇರಿದ ನಾಲ್ವರು ಶಾಸಕರು ಹಾಗೂ ಅಧಿಕಾರಿಗಳ ಜತೆಯಲ್ಲಿ ವಿಶೇಷ ಸಭೆ ನಡೆಸಲಿದ್ದೇನೆ ಎಂದರು.

ಸಾಲ ಮನ್ನಾ ವಿಚಾರದಲ್ಲಿ ಸರಿಯಾಗಿ ಹಣ ಬಿಡುಗಡೆ ಆಗಿಲ್ಲ ಎಂದು ಹಲವು ಮಂದಿ ದೂರು ನೀಡಿದ್ದಾರೆ. ಜತೆಗೆ ಬಡ್ಡಿ ಮನ್ನಾ ಯೋಜನೆಯಲ್ಲಿ ಮಾ. 31ರೊಳಗೆ ಅಸಲು ಪಾವತಿಸ ಬೇಕು ಎಂಬ ಗಡುವನ್ನು ವಿಸ್ತರಿಸಲು ಅವಕಾಶ ನೀಡುವಂತೆಯೂ ಮನವಿ ಮಾಡಿದ್ದಾರೆ. ಎಲ್ಲ ವಿಚಾರಗಳ ಬಗ್ಗೆ ವಿವರವಾಗಿ ಅಧ್ಯಯನ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕರಾದ ಡಿ. ವೇದವ್ಯಾಸ್‌ ಕಾಮತ್‌, ಡಾ| ವೈ. ಭರತ್‌ ಶೆಟ್ಟಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ವಿಧಾನ ಪರಿಷತ್‌ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಉಪಸ್ಥಿತರಿದ್ದರು. ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಸ್ವಾಗತಿಸಿದರು. ಕಸ್ತೂರಿ ಪಂಜ ವಂದಿಸಿದರು. ಸುಧೀರ್‌ ಶೆಟ್ಟಿ ಕಣ್ಣೂರು ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next