Advertisement

ಹಾನಿ ಪ್ರದೇಶಗಳ ಮರು ನಿರ್ಮಾಣಕ್ಕೆ ಯೋಜನೆ 

06:45 AM Aug 27, 2018 | Team Udayavani |

ಮಡಿಕೇರಿ: ಜಲಪ್ರಳಯದಿಂದ ತತ್ತರಿಸಿರುವ ಕೊಡಗು ಜಿಲ್ಲೆಯನ್ನು ಪುನರ್‌ ನಿರ್ಮಿಸುವ ಸಂಬಂಧ ವಸ್ತುಸ್ಥಿತಿಯ ವರದಿಯನ್ನು ಮುಂದಿನ ಹತ್ತು ದಿನಗಳಲ್ಲಿ ಸರಕಾರಕ್ಕೆ ಸಲ್ಲಿಸುವುದಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ನೇತೃತ್ವದಲ್ಲಿ ರೂಪುಗೊಂಡಿರುವ ನಿವೃತ್ತ ಇಂಜಿನಿಯರ್‌ಗಳ ಪರಿಣಿತರ ತಂಡ ತಿಳಿಸಿದೆ. 

Advertisement

ವಿಶ್ವನಾಥ್‌ ಅವರ ನೇತೃತ್ವದ ಮೈಸೂರಿನ ಇನ್ಸ್‌ ಸ್ಟಿಟ್ಯೂಟ್‌ ಆಫ್ ಇಂಜಿನಿಯರಿಂಗ್‌ ಸಂಸ್ಥೆಯ 12 ತಂತ್ರಜ್ಞರ ತಂಡ ಮಡಿಕೇರಿಗೆ ಭೇಟಿ ನೀಡಿ, ಭೂಕುಸಿತದಿಂದ ನಲುಗಿ ನಾಶವಾಗಿರುವ ವಿವಿಧ ರಸ್ತೆಗಳನ್ನು ಪರಿಶೀಲಿಸಿತು. ಮಡಿಕೇರಿಯಿಂದ ಆರಂಭಿಸಿ ಮಳೆಯ ರುದ್ರನರ್ತನದಿಂದ ಕಂಗೆಟ್ಟ ಕೊಡಗು ಜಿಲ್ಲೆಯಲ್ಲಿ ಪುನರ್‌ ನಿರ್ಮಾಣ ಕಾರ್ಯ ಹೇಗೆ ನಡೆಯಬೇಕು. ಈಗಿನ ಪರಿಸ್ಥಿತಿಗೆ ಏನು ಕಾರಣ, ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆಯಾಗ ದಂತೆ ಮಾಡಲು ಕೈಗೊಳ್ಳಬೇಕಾದ ಕ್ರಮಗಳೇನು?, ವಾಸ್ತವವಾಗಿ ಕೊಡಗಿನ ಪುನರ್‌ ನಿರ್ಮಾಣ ಕಾರ್ಯಕ್ಕೆ ಆಗುವ ವೆಚ್ಚವೆಷ್ಟು ಎಂಬುದರ ಕುರಿತು ಈ ತಂಡ ಸರ್ಕಾರಕ್ಕೆ ಕೂಲಂಕುಷ ವರದಿ ನೀಡಲಿದೆ.

Advertisement

Udayavani is now on Telegram. Click here to join our channel and stay updated with the latest news.

Next