Advertisement

ಸಣ್ಣ ಕೈಗಾರಿಕೆಗಳ ನೆರವಿಗೆ ಯೋಜನೆ: ಸಿದ್ದರಾಮಯ್ಯ ಆಗ್ರಹ

02:36 AM May 03, 2020 | Sriram |

ಬೆಂಗಳೂರು: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತೀವ್ರ ನಷ್ಟಕ್ಕೆ ಒಳಗಾಗಿರುವ ರಾಜ್ಯದ ಸಣ್ಣ ಕೈಗಾರಿಕೆಗಳ ನೆರವಿಗೆ ರಾಜ್ಯ ಮತ್ತು ಕೇಂದ್ರ ಸರಕಾರ ವಿಶೇಷ ಯೋಜನೆ ರೂಪಿಸುವ ಅಗತ್ಯವಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಕಳೆದ 40 ದಿನಗಳಿಂದ ಸಣ್ಣ ಕೈಗಾರಿಕೆಗಳಲ್ಲಿ ಉತ್ಪಾದನ ಚಟುವಟಿಕೆ ಬಂದ್‌ ಆಗಿದ್ದು, ಸರಕಾರಕ್ಕೆ ಬರಬೇಕಾದ ಆದಾಯವೂ ನಿಂತು ಹೋಗಿದೆ. ಸಣ್ಣ ಕೈಗಾರಿಕೆಗಳಲ್ಲಿ ಮತ್ತೆ ಚಟುವಟಿಕೆಗಳು ಆರಂಭವಾಗಬೇಕಾದರೆ ಸರಕಾರ ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸುವ ವ್ಯವಸ್ಥೆ ಮಾಡಬೇಕು ಎಂದರು.

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘ ಮತ್ತು ಪೀಣ್ಯ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ನಷ್ಟದಲ್ಲಿರುವ ಸಣ್ಣ ಕೈಗಾರಿಕೆಗಳು ಚೇತರಿಸಿಕೊಳ್ಳಬೇಕಾದರೆ ಕೆಲವೊಂದು ರಿಯಾಯಿತಿಗಳನ್ನು ಸರಕಾರ ಘೋಷಣೆ ಮಾಡಬೇಕು. ಎಂದರು.

ಸಂಘಗಳ ಪ್ರಮುಖ ಬೇಡಿಕೆಗಳು
– ಎಫ್‌ಐಆರ್‌ಸಿ ಬಿಲ್ಲುಗಳನ್ನು ಪಾವತಿ ಮಾಡಲು ಅವಧಿ ವಿಸ್ತರಣೆ.
– ಮಾಸಿಕ ವಿದ್ಯುತ್‌ ಶುಲ್ಕ ಪಾವತಿ ಒಂದು ವರ್ಷದವರೆಗೆ ಮನ್ನಾ.
– ಕಾರ್ಮಿಕರ ಇಎಸ್‌ಐ, ಪಿಎಫ್‌ ವಂತಿಗೆ ಪಾವತಿ ಆರು ತಿಂಗಳ ವರೆಗೆ ಮನ್ನಾ.
– ಬ್ಯಾಂಕ್‌ ಸಾಲದ ಮೇಲಿನ ಬಡ್ಡಿ ಮನ್ನಾ, ಬಡ್ಡಿ ಮತ್ತು ದಂಡ ಬಡ್ಡಿ ಕೈ ಬಿಡುವುದು.

Advertisement

Udayavani is now on Telegram. Click here to join our channel and stay updated with the latest news.

Next