Advertisement

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

09:13 AM Dec 23, 2024 | Team Udayavani |

ಗ್ರಾಮಡೊ: ಪ್ರವಾಸಿಗರನ್ನು ಹೊತ್ತ ಲಘು ವಿಮಾನವೊಂದು ವಾಣಿಜ್ಯ ಕಟ್ಟಗಳಿಗೆ ಡಿಕ್ಕಿ ಹೊಡೆದು ಪತನಗೊಂಡ ಪರಿಣಾಮ ಬ್ರೆಜಿಲ್ ಉದ್ಯಮಿ, ಆತನ ಕುಟುಂಬ ಸದಸ್ಯರು ಸೇರಿ ಒಟ್ಟು ಹತ್ತು ಮಂದಿ ಮೃತಪಟ್ಟಿರುವ ಘಟನೆ ದಕ್ಷಿಣ ಬ್ರೆಜಿಲ್‌ನ ಗ್ರಾಮಡೊ ನಗರದಲ್ಲಿ ಭಾನುವಾರ(ಡಿ.22) ರಂದು ಸಂಭವಿಸಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

Advertisement

ವಿಮಾನದಲ್ಲಿ ಬ್ರೆಜಿಲ್ ನ ಉದ್ಯಮಿ ಲೂಯಿಜ್ ಕ್ಲಾಡಿಯೊ ಸಾಲ್ಗುಯಿರೊ ಗಲಿಯಾಝಿ ಅವರು ತಮ್ಮ ಕುಟುಂಬ ಸದಸ್ಯರ ಜೊತೆ ಸಾವೊ ಪಾಲೊ ರಾಜ್ಯಕ್ಕೆ ಪ್ರಯಾಣಿಸುತ್ತಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಡಿಕ್ರಿಗಳ ಮಾಹಿತಿ ಪ್ರಕಾರ ವಿಮಾನದಲ್ಲಿ ಇದವರೆಲ್ಲರೂ ಮೃತಪಟ್ಟಿರುವುದಾಗಿ ನಾಗರಿಕ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ಕ್ಯಾನೆಲಾದಿಂದ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಪಕ್ಕದಲ್ಲಿರುವ ಕಟ್ಟಡದ ಚಿಮಣಿಗೆ ಡಿಕ್ಕಿ ಹೊಡೆದಿದೆ ಬಳಿಕ ನಿಯಂತ್ರಣ ಕಳೆದುಕೊಂಡು ವಾಣಿಜ್ಯ ಕಟ್ಟಡಕ್ಕೆ ಅಪ್ಪಳಿಸಿದೆ ಪರಿಣಾಮ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ, ಈ ವೇಳೆ ಕಟ್ಟದಲ್ಲಿದ್ದ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ರಿಯೊ ಗ್ರಾಂಡೆ ಡೊ ಸೂಲ್ ರಾಜ್ಯ ಭದ್ರತಾ ಕಾರ್ಯದರ್ಶಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಘಟನೆಯಲ್ಲಿ ಹದಿನೇಳು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಕೆಲ ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ. ಅಪಘಾತದ ಕುರಿತು ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

ಇದನ್ನೂ ಓದಿ: ‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Advertisement

Udayavani is now on Telegram. Click here to join our channel and stay updated with the latest news.

Next