Advertisement

ಬಜಪೆ  ದುರಂತ: ಖಾಸಗಿ ದೂರು ರದ್ದು

01:09 AM Mar 12, 2021 | Team Udayavani |

ಬೆಂಗಳೂರು: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2010ರಲ್ಲಿ ನಡೆದಿದ್ದ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಏರ್‌ ಇಂಡಿಯಾ ಹಾಗೂ  ಅಧಿಕಾರಿಗಳ ವಿರುದ್ಧ ದಾಖಲಿಸಲಾಗಿದ್ದ ಖಾಸಗಿ ದೂರು ಮತ್ತು  ವಿಚಾರಣೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

Advertisement

ಪ್ರಕರಣದಲ್ಲಿ ಮಂಗಳೂರು 2ನೇ ಜೆಎಂಎಫ್ಸಿ ಕೋರ್ಟ್‌ ಕ್ರಮವನ್ನು ಪ್ರಶ್ನಿಸಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿ ಪೀಟರ್‌ ಅಬ್ರಹಾಂ, ಏರ್‌ಇಂಡಿಯಾ  ಅಧಿಕಾರಿ ಆನ್ಸಬರ್ಟ್‌ ಡಿ’ ಸೋಜಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಅಶೋಕ್‌ ಜಿ. ನಿಜಗಣ್ಣನವರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರು ಮತ್ತು ಅದನ್ನು ಆಧರಿಸಿ 2ನೇ ಜೆಎಂಎಫ್ಸಿ ಕೋರ್ಟ್‌ ನಡೆಸುತ್ತಿದ್ದ ವಿಚಾರಣೆಯನ್ನು ರದ್ದುಪಡಿಸಿತು.

2010ರ ಮೇ 25ರಂದು ದುಬಾೖಯಿಂದ ಮಂಗಳೂರಿಗೆ ಬಂದಿದ್ದ ಏರ್‌ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 152 ಪ್ರಯಾಣಿಕರು ಸಾವನ್ನಪ್ಪಿದ್ದರು. ಇದಕ್ಕೆ ಸಂಬಂಧಿಸಿ 2012ರ ಮಾ. 6ರಂದು ಮಂಗಳೂರು ಮೂಲದ “812 ಫೌಂಡೇಷನ್‌’ ಖಾಸಗಿ ದೂರು ದಾಖಲಿಸಿತ್ತು. ಐಸಿಎಒ ಮಾನದಂಡಗಳ ಅನುಸಾರ ಕಾರ್ಯನಿರ್ವಹಣೆಗೆ ವಿಮಾನ ನಿಲ್ದಾಣ ಯೋಗ್ಯವಾಗಿರಲಿಲ್ಲ. ಆದರೂ ವೈಮಾನಿಕ ಚಟುವಟಿಕೆ ನಡೆಯುತ್ತಿತ್ತು. ಏರ್‌ ಇಂಡಿಯಾ ಪ್ರಾಧಿಕಾರ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯದ ನಿರ್ದೇಶಕರ ಸಂಪೂರ್ಣ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next