Advertisement

ರಷ್ಯಾ: ಸಿಬಂದಿ ಸೇರಿ 28 ಮಂದಿ ಪ್ರಯಾಣಿಸುತ್ತಿದ್ದ ಎಎನ್-26 ವಿಮಾನ ನಾಪತ್ತೆ

12:30 PM Jul 06, 2021 | Team Udayavani |

ಮಾಸ್ಕೋ: 28 ಮಂದಿ ಪ್ರಯಾಣಿಸುತ್ತಿದ್ದ ರಷ್ಯಾದ ಎಎನ್-26 ವಿಮಾನ ರಷ್ಯಾದ ಪೂರ್ವಭಾಗದಿಂದ ಮಂಗಳವಾರ ನಾಪತ್ತೆಯಾಗಿರುವ ಘಟನೆ ನಡೆದಿದೆ ಎಂದು ದೇಶದ ತುರ್ತು ಸಚಿವಾಲಯ ಮಾಹಿತಿಯನ್ನು ನೀಡಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 1,000 ವಿಕೆಟ್ ಪಡೆದ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್

ಎಎನ್ 26 ವಿಮಾನ ಭೂಸ್ಪರ್ಶ ಮಾಡುವ ಪ್ರಯತ್ನದಲ್ಲಿರುವ ವೇಳೆಯಲ್ಲಿಯೇ ಸಂಪರ್ಕ ಕಳೆದುಕೊಂಡಿರುವುದಾಗಿ ವರದಿ ಹೇಳಿದೆ. ಈ ವಿಮಾನ ಪೆಟ್ರೋಪವ್ಲೊವಸ್ಕ್ ನಿಂದ ಕಾಮ್ಚಾಟ್ಸಿಕಿಯಲ್ಲಿರುವ ಪಲಾನಾ ಗ್ರಾಮದ ಮಾರ್ಗದ ಸಮೀಪದಲ್ಲಿರುವಾಗ ವಾಯು ಸಂಚಾರ ನಿಯಂತ್ರಣ ವಿಭಾಗದ ಜತೆಗಿನ ಸಂಪರ್ಕ ಕಳೆದುಕೊಂಡಿತ್ತು ಎಂದು ಸಚಿವಾಲಯ ವಿವರಿಸಿದೆ.

ಘಟನೆ ನಡೆದ ಸ್ಥಳಕ್ಕೆ ರಕ್ಷಣಾ ಮತ್ತು ಶೋಧಕಾರ್ಯಾಚರಣೆ ತಂಡ ತೆರಳುತ್ತಿದ್ದಾರೆ. ವಿಮಾನದಲ್ಲಿ ಆರು ಮಂದಿ ಸಿಬಂದಿಗಳು ಹಾಗೂ 22 ಮಂದಿ ಪ್ರಯಾಣಿಕರಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಘಟನೆ ನಡೆದ ಪ್ರದೇಶದಲ್ಲಿ ಮೋಡ ಮುಸುಕಿದ ವಾತಾವರಣ ಇದ್ದಿರುವುದಾಗಿ ಹವಾಮಾನ ಇಲಾಖೆ ತಿಳಿಸಿರುವುದಾಗಿ ಇಂಟರ್ ಫಾಕ್ಸ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next