Advertisement

ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿ ಗೆ ಯೋಜನೆ

11:56 AM Oct 21, 2019 | Team Udayavani |

ಬಾದಾಮಿ: ಐತಿಹಾಸಿಕ ಚಾಲುಕ್ಯರ ರಾಜಧಾನಿ ಬಾದಾಮಿ, ಐಹೊಳೆ, ಪಟ್ಟದಕಲ್ಲ ತಾಣಗಳ ಸಮಗ್ರ ಅಭಿವೃದ್ಧಿಗಾಗಿ ಯೋಜನೆ ರೂಪಿಸಲಾಗುತ್ತಿದೆ ಎಂದು ರಾಜ್ಯದ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದರು.

Advertisement

ಬಾದಾಮಿ ನಗರದ ಮೇಲಿನ ಬಸದಿಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ತ್ರಿಸ್ಟಾರ್‌ ಹೋಟೆಲ್‌ ನಿರ್ಮಾಣಕ್ಕೆ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಅಗಸ್ತ್ಯ ತೀರ್ಥ ಹೊಂಡದ ಮೇಲಿರುವ 96 ಮನೆಗಳ ಸ್ಥಳಾಂತರ, ಚಾಲುಕ್ಯರ ಕಾಲದ ಪ್ರವಾಸಿ ತಾಣ ಅಭಿವೃದ್ಧಿ, ಕೇಂದ್ರ ಸರಕಾರದ ಹೃದಯ ಯೋಜನೆ

ಸೇರಿದಂತೆ ಪ್ರವಾಸಿ ತಾಣ ಅಧ್ಯಯನ ಮಾಡಲು ಬಂದಿರುವೆ. ಅಧ್ಯಯನ ಮಾಡಿದ ನಂತರ ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ಕ್ರಿಯಾ ಯೋಜನೆ ತಯಾರಿಸಿ ಅನುಷ್ಟಾನಗೊಳಿಸಲಾಗುವುದು ಎಂದು ತಿಳಿಸಿದರು.

ಬಾದಾಮಿ ಪ್ರವಾಸೋದ್ಯಮಕ್ಕೆ ಅನುದಾನ ಮಂಜೂರಿಯಾಗಿರುವುದು ನನ್ನ ಗಮನಕ್ಕೆ ಬಂದಿಲ್ಲ. 25 ಕೋಟಿ ಅನುದಾನ ಮಂಜೂರಿಯಾಗಿದ್ದರೆ ಅದಕ್ಕೆ ಇನ್ನು 25 ಕೋಟಿ ಸೇರಿಸಿ ಅಭಿವೃದ್ಧಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಪ್ರವಾಸೋದ್ಯಮ ಇಲಾಖೆಯಲ್ಲಿ ಕೆಲವು ಸಮಸ್ಯೆಗಳಿವೆ. ಸಿಬ್ಬಂದಿ ಕೊರತೆ ಇದೆ. ಸಹಾಯಕ ನಿರ್ದೇಶಕರ ಕಚೇರಿಯನ್ನು ಬಾದಾಮಿಗೆ ಸ್ಥಳಾಂತರ

ಮಾಡುವ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ಚಾಲುಕ್ಯ ಅಭಿವೃದ್ಧಿ ಪ್ರಾಧಿಕಾರ ರಚನೆ ಬಗ್ಗೆಯೂ ಶೀಘ್ರ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

Advertisement

ಸಂಸದ ಪಿ.ಸಿ. ಗದ್ದಿಗೌಡರ, ಪಿಕಾರ್ಡ್‌ ಅಧ್ಯಕ್ಷ ಮಹಾಂತೇಶ ಮಮದಾಪುರ, ಶಾಂತಗೌಡ ಪಾಟೀಲ, ನಾಗರಾಜ ಕಡಗದ, ಬೇಲೂರಪ್ಪ ವಡ್ಡರ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next