ರಾಮನಗರ: ಜಿಲ್ಲೆಯ ಎಲ್ಲಾ ಗ್ರಾಮಗಳ ಮನೆಗಳಿಗೆ ಕೊಳಾಯಿ ಮೂಲಕ ಶುದ್ಧ ನೀರು ಒದಗಿಸುವ 675 ಕೋಟಿ ರೂ. ಯೋಜನೆಗೆ ಇನ್ನು 3 ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಾ. ಸಿ.ಎನ್. ಅಶ್ವಥನಾರಾಯಣ ಹೇಳಿದರು.
ಬೆಂಗಳೂರಿನ ಅವರ ಕಚೇರಿಯಲ್ಲಿ ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಅಧಿಕಾರಿಗಳು, ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳ ಜಂಟಿ ಸಭೆಯಲ್ಲಿ ಯೋಜನೆಯ ಅಗತ್ಯದ ಬಗ್ಗೆ ಪರಿಶೀಲನೆ ನಡೆಸಿದ ನಂತರ ಅವರು ಮಾತ ನಾಡಿದರು. ನದಿ ಮೂಲದಲ್ಲಿ ಜಲ ಸಂಪತ್ತು: ಈ ಯೋಜನೆ ಯಡಿ ಮನೆಗಳಿಗೆ ನೀರು ಒದಗಿಸಲು ಜಿಲ್ಲೆಯ ನದಿ ಗಳಲ್ಲಿ ಅಗತ್ಯ ಜಲ ಮೂಲದ ಲಭ್ಯತೆಯ ಬಗ್ಗೆ ಕೇಂದ್ರದ ಅಧಿಕಾರಿಗಳು ಪ್ರಶ್ನೆ ಎತ್ತಿದ್ದರು.
ನೀರು ಪೂರೈಕೆಗೆ ಜಿಲ್ಲೆಯ ನದಿ ಮೂಲಗಳಲ್ಲಿ ಜಲ ಸಂಪತ್ತು ಲಭ್ಯವಿದೆ ಎಂದು ಕೇಂದ್ರದ ಅಧಿಕಾರಿಗಳ ಗಮನ ಸೆಳೆಯಲಾಗಿದೆ ಎಂದರು. ಜಿಲ್ಲೆಯ ನಾಲ್ಕು ತಾಲೂಕುಗಳ 127 ಗ್ರಾಮ ಪಂಚಾಯಿತಿಗಳ 850 ಗ್ರಾಮಗಳಿಗೆ ನೀರೊದಗಿಸಬೇಕಾಗಿದೆ. ಒಟ್ಟು 2,08,544 ಮನೆಗಳಲ್ಲಿ ವಾಸವಿರುವ 8,85,520 ಜನರಿಗೆ ಶುದ್ಧ ಕುಡಿಯುವ ನೀರು ಸಿಗಲಿದೆ. ಈ ಯೋಜನೆಗೆ 675 ಕೋಟಿ ರೂ. ಅಗತ್ಯವಿದೆ ಎಂದರು.
ಕಾರ್ಯಗತವಾಗಬೇಕಾಗಿದೆ ಯೋಜನೆ: ಮುಖ್ಯ ವಾಗಿ ರಾಮನಗರ ಮತ್ತು ಮಾಗಡಿ ತಾಲೂಕುಗಳು, ಕನಕಪುರ ತಾಲೂಕಿನ ದೊಡ್ಡ ಮರಳವಾಡಿ ವ್ಯಾಪ್ತಿಯಲ್ಲಿ ಯೋಜನೆ ಕಾರ್ಯಗತವಾಗ ಬೇಕಾಗಿದೆ. ಜಿÇÉೆಯ 2,08,544 ಮನೆಗಳ ಬಳಿಕವೂ ಕೆಲವು ಮನೆಗಳಿಗೆ ನೀರು ಒದಗಿಸುವ ಕಾರ್ಯ ಮಾಡಬೇಕಾಗಿದೆ. ಚನ್ನಪಟ್ಟಣ ತಾಲೂಕಿನ 12,764, ರಾಮನಗರ ತಾಲೂಕಿನ 91,984 ಮನೆಗಳಿಗೆ ನೀರೊದಿಗಿಸುವ ಯೋಜನೆಯನ್ನು ಈ ವರ್ಷವೇ “ಏಕ ಕಣಿವೆ ಯೋಜನೆ” ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಮಾಹಿತಿ ಕೊಡಲಾಗಿದೆ ಎಂದು ಹೇಳಿದರು. ಅಧಿಕಾರಿಗಳ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ….ಕೆ. ಅತೀಕ್, ಉಪ ಮುಖ್ಯಮಂತ್ರಿಯವರ ಕಾರ್ಯದರ್ಶಿ ಪಿ.ಪ್ರದೀಪ, ರಾಮನಗರ ಜಿÇÉಾ ಪಂಚಾಯಿತಿ ಸಿಇಒ ಇಕ್ರಂ ಸೇರಿದಂತೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಹಾಜರಿದ್ದರು.