Advertisement

ಗ್ರಾಮೀಣ ಮಟ್ಟದಿಂದಲೇ ಯುವ ಸಬಲೀಕರಣಕ್ಕೆ ಯೋಜನೆ

08:10 PM Feb 02, 2022 | Team Udayavani |

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯಕ್ರಮ ಗ್ರಾಮೀಣ ಮಟ್ಟದಿಂದಲೇ ಯಶಸ್ವಿಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯೊಂದಿಗೆ ಜತೆಗೂಡಿ ಕಾರ್ಯಕ್ರಮ ರೂಪಿಸಲಾಗಿದೆ.

Advertisement

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಅಭಿವೃದ್ಧಿ ಯೋಜನೆಗಳಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪಂಚಾಯತ್‌ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡುತ್ತಿವೆ. ಹೀಗಾಗಿ, ಗ್ರಾಮೀಣಾಭಿವೃದ್ಧಿ ಪಂಚಾಯತ್‌ ಇಲಾಖೆಯ ಜತೆಗೂಡಿ ಅನುಷ್ಠಾನಕ್ಕೆ ತೀರ್ಮಾನಿಸಲಾಗಿದೆ.

ಸಿಬ್ಬಂದಿ ಕೊರತೆಯಿಂದ ಪಂಚಾಯತ್‌ ಮಟ್ಟದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲು ಹಿನ್ನಡೆಯಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಸ್ಥಳೀಯರು, ಸಂಘ ಸಂಸ್ಥೆಗಳು, ಅಧ್ಯಕ್ಷರು, ಕಾರ್ಯದರ್ಶಿಗಳನ್ನು ನಿಯೋಜಿಸಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣ ಗೌಡ ತಿಳಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ದೇಸೀ ಹಾಗೂ ಜಾನಪದ ಮತ್ತು ಸ್ಥಳೀಯ ಕ್ರೀಡೆಗಳಿಗೆ ಉತ್ತೇಜನ ನೀಡಲು ಗ್ರಾಮೀಣ ಕ್ರೀಡೋತ್ಸವವನ್ನು ಆಯೋಜಿಸಲಾಗುತ್ತಿದೆ. ಅಲ್ಲದೇ ‘ನಮ್ಮೂರ ಶಾಲೆಗೆ ನಮ್ಮ ಯುವಜನರು’ ಕಾರ್ಯಕ್ರಮದಡಿ ಶಾಲೆಗಾಗಿ ಗಣನೀಯ ಕೊಡುಗೆ ನೀಡುವ ಯುವ ಸಂಘಗಳನ್ನು ತಾಲೂಕಿಗೆ ಒಂದರಂತೆ ಗುರುತಿಸಿ ಪುರಸ್ಕಾರ ನೀಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:ರಾಜ್ಯದಲ್ಲಿ ಇಂದು 20,505 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 81 ಮಂದಿ ಬಲಿ

Advertisement

ವಾರ್ಡ್‌ ಸಭೆ ಹಾಗೂ ಗ್ರಾಮ ಸಭೆ ಮೂಲಕ 5 ವರ್ಷ ದೂರದೃಷ್ಠಿ ಯೋಜನೆ ತಯಾರಿಸಿ, ಅದರಿಂದ ವಾರ್ಷಿಕ ಕಾರ್ಯಕ್ರಮ ರೂಪಿಸಲು 15 ಅಂಶಗಳಿಗೆ ಒತ್ತು ನೀಡಿ ಅನುಷ್ಟಾನಗೊಳಿಸಲಾಗುವುದು ಎಂದು ತಿಳಿಸಿದರು.

ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ ಮತ್ತು ಪುನಶ್ಚೇತನಗೊಳಿಸಲು ಸಾಂಸ್ಕೃತಿಕ ಕೇಂದ್ರಗಳ ಸ್ಥಾಪನೆ ಹಾಗೂ ಗ್ರಾಮೀಣ ಕಲಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಆಯೋಜನೆಗೆ ಯುವ ಸಂಘಗಳ ಮೂಲಕ ಉತ್ತೇಜನ ನೀಡಲಾಗುವುದು. ಯುವಜನ ಮೇಳ, ಕ್ರೀಡಾ ಮೇಳಗಳ ಆಯೋಜನೆ, ಧಾರ್ಮಿಕ ಸಾಮರಸ್ಯ ಮೂಡಿಸಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next