ಪಿರಿಯಾಪಟ್ಟಣ: ನರೇಂದ್ರ ಮೋದಿ ಆಡಳಿತ ವೈಖರಿ ನೋಡಿ ಯುವ ಜನತೆ ಈ ಬಾರಿ ರಾಜ್ಯದಲ್ಲೂ ಕೂಡ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಬೇಕೆಂದು ಹಗಲಿರುಳು ದುಡಿಯುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥ್ ತಿಳಿಸಿದರು.
ತಾಲೂಕಿನ ಬೆಟ್ಟದಪುರ ಹೋಬಳಿ ಕೇಂದ್ರದಲ್ಲಿ ಪ್ರಮುಖ ಬೀದಿಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಆಗಿಲ್ಲ. ಈ ತಾಲೂಕಿಗೆ ನೀರಾವರಿ ಸೌಲಭ್ಯ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ನೆನಗುದಿಗೆ ಬಿದ್ದಿದೆ.
ಯುವ ಜನತೆಗೆ ಉದ್ಯೋಗ ನೀಡದೆ ನಿರುದ್ಯೋಗಿ ಸಮಸ್ಯೆ ತಾಂಡವವಾಡುತ್ತಿದೆ. ಜೆಡಿಎಸ್, ಕಾಂಗ್ರೆಸ್‌ಗೆ ಅಧಿಕಾರ ಕೊಟ್ಟು ಯಾವುದೇ ಅಭಿವೃದ್ಧಿ ಕಾಮಗಾರಿಗಳು ಆಗಿಲ್ಲ. ಆದ್ದರಿಂದ ಈ ಬಾರಿ ಬಿಜಿಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಪಣ ತೊಟ್ಟಿದ್ದಾರೆ. ಆದ್ದರಿಂದ ತಾಲೂಕಿನ ಜನತೆ ಈ ಬಾರಿ ನನ್ನ ಕೈ ಹಿಡಿಯಲಿದ್ದಾರೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಆರ್.ಟಿ.ಸತೀಶ್ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಕೇಂದ್ರ ಸರ್ಕಾರ ಸಾವಿರಾರು ಕೋಟಿ ರೂ. ಹಣವನ್ನು ರೈತರಿಗೆ ಭಿಮಾ ಯೋಜನೆ, ರಸ್ತೆ, ಚರಂಡಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿದ್ದರೂ, ರಾಜ್ಯ ಸರ್ಕಾರ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ.
ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಲೆ ಇರುವುದರಿಂದ ಮಂಜುನಾಥ್ ಗೆಲುವು ಸಾಧಿಸಿದರೆ ತಾಲೂಕಿನ ಅಭಿವೃದ್ಧಿ ಆಗಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬೆಟ್ಟದಪುರ ಶಕ್ತಿ ಕೇಂದ್ರದ ಸುಂದರ್, ಮುಖಂಡರಾದ ಕಿರಣ್, ಜಯರಾಮೇಗೌಡ, ದೋಡ್ಡಪ್ಪಗೌಡ, ಶಶಿ, ಮಾದಪ್ಪ, ತೇಜಸ್ವಿದಾಸ್, ಪ್ರತಾಪ್, ವರುಣ್ ರಾಜೆ ಅರಸ್ ಇನ್ನಿತರರಿದ್ದರು.