ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಶುಕ್ರವಾರ ಪಟ್ಟಣದ ಜನರಿಗೆ ಅಚ್ಚರಿಯೊಂದು ಕಾದಿತ್ತು. ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಮುಖ್ಯ ರಸ್ತೆ ವಿಭಜಕಗಳ ಮಧ್ಯೆ ದಿಢೀರ್ ಗಿಡಗಳು ಪ್ರತ್ಯಕ್ಷವಾಗಿದ್ದವು. ಪಟ್ಟಣದ ರಿಲಾಯನ್ಸ್ ಪೆಟ್ರೋಲ್ ಬಂಕ್‌ನಿಂದ ಬಸವೇಶ್ವರ ವೃತ್ತದ ವರೆಗೆ ಗಿಡ ನೆಡಲಾಗಿದೆ.
Advertisement
ತರಾತುರಿಯಲ್ಲಿ ಗಿಡ ನೆಡುವುದರ ಜತೆಗೆ ಹೈದ್ರಾಬಾದ-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 1.08 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ವಿದ್ಯುತ್ ಕಂಬಗಳೊಂದಿಗೆ ಎಲ್‌ಇಡಿ ಬಲ್ಬ್ ಅಳವಡಿಸುವ ಕಾರ್ಯಕ್ಕೂ ಚಾಲನೆ ನೀಡಲಾಗಿದೆ. ಕಳೆದ 4 ವರ್ಷಗಳಲ್ಲಿ ನಡೆಯದ ಕಾಮಗಾರಿಗಳನ್ನು ದಿಢೀರ್ ಕೈಗೆತ್ತಿಕೊಂಡ ಶಾಸಕರ ನಡೆಗೆ ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ ಹಾಗೂ ಬಿಜೆಪಿ ಜಿಪಂ ಸದಸ್ಯ ಶಿವರಾಜ ಪಾಟೀಲ ರದ್ದೇವಾಡಗಿ ಆಕ್ಷೇಪವ್ಯಕ್ತ ಪಡಿಸಿದ್ದಾರೆ. ರಾಹುಲ್ ಗಾಂಧಿ ಆಗಮನಕ್ಕೂ ಗಿಡ ನೆಡುತ್ತಿರುವುದಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ನಗರ ಸೌಂದರ್ಯಿಕರಣವಾಗಬೇಕು ಎಂಬ ಉದ್ದೇಶದಿಂದ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಯಾವುದೇ ಸರ್ಕಾರದ ಅನುದಾನದಲ್ಲಿ ಈ ಕೆಲಸ ಮಾಡುತ್ತಿಲ್ಲ. ಬದಲಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಗಿಡ ನೆಡಲಾಗುತ್ತಿದೆ ಎಂದು ಶಾಸಕ ಡಾ| ಅಜಯಸಿಂಗ್ ಸ್ಪಷ್ಟಪಡಿಸಿದ್ದಾರೆ.