Advertisement
ಶ್ರೀನಗರದ ಸರ್ಕಾರಿ ಆಸ್ಪತ್ರೆಯಲ್ಲಿ 61 ವರ್ಷ ವೃದ್ಧೆ ಮತ್ತು 63 ವರ್ಷದ ವೃದ್ಧ ಕೋವಿಡ್ ದಿಂದ ಬಳಲುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಈ ಹಿನ್ನೆಲೆ ಪ್ಲಾಸ್ಮಾ ಚಿಕಿತ್ಸೆಗೆ ಅನಿವಾರ್ಯವಾಗಿತ್ತು. ಸೋಂಕಿತರ ಸ್ಥಳೀಯ ಸಂಬಂಧಿಗಳು ಎಚ್‌ಸಿಜಿ ಆಸ್ಪತ್ರೆಯ ಪ್ಲಾಸ್ಮಾ ಬ್ಯಾಂಕ್‌ನಲ್ಲಿ ಪ್ಲಾಸ್ಮಾ ನೆರವಿಗೆ ಮನವಿ ಮಾಡಿದ್ದರು. ಹೀಗಾಗಿ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಇಂಡಿಗೋ ವಿಮಾನ ಸಿಬ್ಬಂದಿ ನೆರವು ಪಡೆದು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಎರಡು ಯುನಿಟ್ ಪ್ಲಾಸ್ಮಾವನ್ನು ಶ್ರೀನಗರಕ್ಕೆ ಕಳುಹಿಸಲಾಗಿದೆ ಎಂದು ಪ್ಲಾಸ್ಮಾ ಬ್ಯಾಂಕಿನ ಮುಖ್ಯಸ್ಥರಾದ ಡಾ. ವಿಶಾಲ್ ರಾವ್ ತಿಳಿಸಿದ್ದಾರೆ.
Related Articles
Advertisement
ನಗರದಲ್ಲಿ ಸೋಂಕಿತರನ್ನು ಶೀಘ್ರ ಪತ್ತೆ ಮಾಡುವ ಉದ್ದೇಶದಿಂದ ಪಾಲಿಕೆಯು 232 ಮೊಬೈಲ್ ವಾಹನದ ಮೂಲಕ ಕೊರೊನಾ ಟೆಸ್ಟ್ ಮಾಡಲು ವ್ಯವಸ್ಥೆ ಮಾಡಿಕೊಂಡಿದ್ದು. ಇಲ್ಲಿಯವರೆಗೆ ಒಟ್ಟು 2,57,263 ಜನರನ್ನು ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದೆ. 84,170 ಜನರನ್ನು ರ್ಯಾಪಿಡ್ ಆ್ಯಂಟಿಜನ್ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದೆ. ಇನ್ನು 1,73,093 ಜನರಿಗೆ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದರು. ಸಾರ್ವಜನಿಕ ಪ್ರದೇಶಗಳಲ್ಲಿ ಸೋಂಕು ಪರೀಕ್ಷೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಮೊಬೈಲ್ ವಾಹನಗಳಲ್ಲಿ ಶೇ.20ರಷ್ಟು ಜನರೂ ಸೋಂಕು ಪರೀಕ್ಷೆ ಮಾಡಿಸಿಕೊಳ್ಳುತ್ತಿಲ್ಲ ಎನ್ನುವ ಆರೋಪಗಳು ಕೇಳಿಬಂದಿದ್ದವು. ಈ ಮಧ್ಯೆ ಮೊಬೈಲ್ ವಾಹನದ ಮೂಲಕ 2.50 ಲಕ್ಷಕ್ಕೂ ಹೆಚ್ಚು ಜನ ಪರೀಕ್ಷೆಗೆ ಒಳಗಾಗಿದ್ದಾರೆ ಎಂದರು.