Advertisement

ನಗರದಲ್ಲಿ ಪ್ಲಾಸ್ಟಿಕ್‌ ಜಾಗೃತಿ ಜಾಥಾ

04:42 PM Dec 09, 2019 | Suhan S |

ಮಂಡ್ಯ: ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ನಿಷೇಧ ಮಾಡಲಾಗಿದ್ದು, ಸಾರ್ವಜನಿಕರು, ಅಂಗಡಿ ಮುಂಗಟ್ಟುಗಳ ಮಾಲಿಕರು ಸಹಕಾರ ನೀಡಬೇಕು ಎಂದು ಪರಿಸರ ಎಂಜಿನಿಯರ್‌ ಮೀನಾಕ್ಷಿ ಹೇಳಿದರು.

Advertisement

ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಪ್ಲಾಸ್ಟಿಕ್‌ ನಿಷೇಧ ಕುರಿತು ನಗರದ ವಿವಿಧ ಬಡಾವಣೆಗಳಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿಷೇಧಿತ ಪ್ಲಾಸ್ಟಿಕ್‌ ಮಾರಾಟ ಮಾಡಿದ್ದಲ್ಲಿ, ಅಂತಹ ಅಂಗಡಿ ಮಾಲಿಕರಿಗೆ 1 ಸಾವಿರ ರೂ. ದಂಡ ವಿಧಿಸಲಾಗುವುದು. ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ ಮಾಡಿದ್ದು, ಸಾರ್ವಜನಿಕರು ಹಾಗೂ ಅಂಗಡಿ ಮಾಲಿಕರಿಗೆ ಈ ಬಗ್ಗೆ ಜಾಗೃತಿ ಮೂಡಿಸಲು ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‌ ಅನ್ನು ತ್ಯಜಿಸುವ ನಿರ್ಧಾರವನ್ನು ಪ್ರತಿಯೊಬ್ಬರೂ ಮಾಡಬೇಕಿದೆ. ಕೇವಲ ಅಧಿಕಾರಿಗಳಿಂದ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಸಾರ್ವಜನಿಕರ ಸಹಭಾಗಿತ್ವ ಮುಖ್ಯವಾಗಿದೆ ಎಂದು ತಿಳಿಸಿದರು.

ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷೆ ವಿಶಾಲಾಕ್ಷಿ ನಾಗರಾಜು ಮಾತನಾಡಿ, ಪ್ಲಾಸ್ಟಿಕ್‌ ಮುಕ್ತ ನಗರವನ್ನಾಗಿ ಮಾಡಲು ಹೋರಾಟ ನಡೆಸಲಾಗುತ್ತಿದ್ದು, ನಗರಸಭೆಯ ಸಹಕಾರದೊಂದಿಗೆ ಜಾಗೃತಿ ಜಾಥಾ ನಡೆಸಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಹೈದ್ರಾಬಾದ್‌ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ, ಹತ್ಯೆಗೈದಿರುವುದನ್ನು ಖಂಡಿಸಿ ಮೌನಾಚರಣೆ ಮೂಲಕ ಸಂತಾಪ ಸೂಚಿಸಲಾಯಿತು.

Advertisement

ಜಾಥಾದಲ್ಲಿ ನೀರಜಾ ಪದ್ಮನಾಭ್‌ ಹಾಗೂ ಪೊ›ಫೆಷನಲ್‌ ಮಹಿಳಾ ವಸತಿ ನಿಲಯದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಗರದ ವಿ.ವಿ.ರಸ್ತೆ, ಹೊಸಹಳ್ಳಿ ರಸ್ತೆ, ಕೆ.ಆರ್‌.ರಸ್ತೆ, ಆರ್‌.ಪಿ.ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಜಾಗೃತಿ ಮೂಡಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next