ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಕ್ಷೇತ್ರದಲ್ಲಿ ಪರಿಸರಕ್ಕೆ ಹಾನಿ ಮಾಡುವ ಹಾಗೂ ಮಾನವ, ಇತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಒಡ್ಡುವ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಸೂಚಿಸಲಾಗಿದ್ದು, ಸ್ಥಳೀಯರು ಸೇರಿ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿ ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ವಿಜಯಾ ಈ.ರವಿಕುಮಾರ್ ಹೇಳಿದರು.
ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಅದರ ದುಷ್ಪರಿಣಾಮಗಳ ಕುರಿತು ಹಮ್ಮಿಕೊಂಡಿದ್ದ ಅರಿವು ಮೂಡಿಸುವ ಸಭೆ ಯಲ್ಲಿ ಮಾತನಾಡಿ, ಘಾಟಿ ಸುಬ್ರಹ್ಮಣ್ಯ ದೇವಾಲಯದ ಆವರಣ ಹಾಗೂ ಹೊರಗಡೆ, ಧಾರ್ಮಿಕ ಕೇಂದ್ರ, ಪ್ರವಾಸೋದ್ಯಮ ಸ್ಥಳಗಳ ಆವರಣದಲ್ಲಿ ಮತ್ತು ಹೊರಗಡೆ ನಿಷೇಧಿತ ಪ್ಲಾಸ್ಟಿಕ್ ನಿಂದ ತಯಾರಿಸಲಾದ ಕ್ಯಾರಿಬ್ಯಾಗ್, ತಟ್ಟೆ, ಲೋಟ, ಬಟ್ಟಲು, ಬ್ಯಾನರ್, ಬಂಟಿಂಗ್ಸ್ ಬಳಕೆ ಮಾಡಬಾರದು ಎಂದರು.
ಜಿಲ್ಲಾಡಳಿತಕ್ಕೆ ಸಹಕರಿಸಿ: ದೇವಾಲಯಕ್ಕೆ ಪೂಜಾ ಸಾಮಗ್ರಿ ಪ್ಲಾಸ್ಟಿಕ್ ಚೀಲಗಳಲ್ಲಿ ತರದಂತೆ ಭಕ್ತರಿಗೆ ಸೂಚನೆ ನೀಡಬೇಕು. ದೇವರ ಪೂಜೆ ಮತ್ತು ಬಟ್ಟೆ, ಕಾಗದದ ಕೈಚೀಲಗಳಲ್ಲಿ, ಸ್ಟೀಲ್ ಅಥವಾ ಇನ್ನಿತರ ಲೋಹ, ಮಣ್ಣಿನ ಪಾತ್ರೆಗಳಲ್ಲಿ ತರುವಂತೆ ಭಕ್ತರಿಗೆ ಕಡ್ಡಾಯ ಸೂಚನೆ ನೀಡಬೇಕು.
ಹಬ್ಬ ಹರಿದಿನಗಳಲ್ಲಿ ಅಥವಾ ವಿಶೇಷ ಸಂದರ್ಭಗಳಲ್ಲಿ ಜಾಹೀರಾತು ನೀಡಲು ಪ್ಲಾಸ್ಟಿಕ್‌ನಿಂದ ತಯಾರಿಸಿದ ಬ್ಯಾನರ್ ಮತ್ತು ಬಂಟಿಂಗಗ್ಸ್ ಬಳಸದಂತೆ ಕ್ರಮ
ವಹಿಸಬೇಕು. ಪ್ಲಾಸ್ಟಿಕ್‌ನಿಂದ ತಯಾರಿಸಿದ ಅಲಂಕಾರಿಕ ಹೂವು, ತೋರಣ ಮುಂತಾದವು ಗಳನ್ನು ಬಳಸದಂತೆ ಜಾಗ್ರತೆ ವಹಿಸಬೇಕು. ದೇವಾಲಯಕ್ಕೆ ಬರುವ ಭಕ್ತರು ಪ್ಲಾಸ್ಟಿಕ್ ನಿಷೇಧಕ್ಕೆ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕಿದೆ. ಇಲ್ಲವಾದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ವಾಹನ ತಪಾಸಣೆ ನಡೆಸಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಕೆ.ಎಂ.ರಮೇಶ್ ಮಾತನಾಡಿ, ದೇವಾಲ ಯಕ್ಕೆ ಬರುವ ಭಕ್ತರಿಗೆ ಪ್ಲಾಸ್ಟಿಕ್ ಬಳಸ ದಂತೆ ಅಧಿಕಾರಿಗಳು ಸಲಹೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಚೆಕ್‌ಪೋಸ್ಟ್ ಗಳಲ್ಲಿಯೇ ವಾಹನ ತಪಾಸಣೆ ನಡೆಸಿ ಪ್ಲಾಸ್ಟಿಕ್ ವಸ್ತುಗಳನ್ನು ದೇವಾ ಲಯಕ್ಕೆ ಕೊಂಡೊಯ್ಯದಂತೆ ಸೂಚಿಸುವು ದು. ದಂಡ ವಿಧಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕಿದೆ. ದೇವಾಲಯದ ಆವರಣದಲ್ಲಿನ ವರ್ತಕರು ಪೂಜಾ ಸಾಮಗ್ರಿ ಪ್ಲಾಸ್ಟಿಕ್ ಚೀಲ ಹೊರತಾಗಿ ಬಟ್ಟೆ ಬ್ಯಾಗ್‌ಗಳಲ್ಲಿ ಹಾಕಿ ನೀಡಬೇಕು ಎಂದರು. ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಡಿ.ನಾಗರಾಜು, ಪರಿ ಸರ ಇಲಾಖೆಯ ವಿಶಾಲಾಕ್ಷಿ, ಮೇಲಿನಜೂಗಾನಹಳ್ಳಿ ಗ್ರಾಪಂ ಉಪಾಧ್ಯಕ್ಷ ವಾಸು, ಪಿಡಿಒ ಗಂಗ ಬೈರಪ್ಪ ಸೇರಿ ದೇವಾಲಯದ ಅಧಿಕಾರಿಗಳು,
ವರ್ತಕರು ಹಾಗೂ ಸಿಬ್ಬಂದಿ ಇದ್ದರು.