Advertisement

ಚಿಕ್ಕಬಳ್ಳಾಪುರದಲ್ಲಿ ಪ್ಲಾಸ್ಟಿಕ್ ಶವಯಾತ್ರೆ

12:59 PM Oct 02, 2019 | Team Udayavani |

ಚಿಕ್ಕಬಳ್ಳಾಪುರ:  ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರ ನಗರಸಭೆ ವತಿಯಿಂದ ಪ್ಲಾಸ್ಟಿಕ್ ಬಳಕೆಯ ಅಪಾಯದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ಲಾಸ್ಟಿಕ್ ವಸ್ತುಗಳನ್ನು ಶವಯಾತ್ರೆ ನಡೆಸಲಾಯಿತು.

Advertisement

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಪ್ಲಾಸ್ಟಿಕ್ ಶವಯಾತ್ರೆಗೆ ಚಾಲನೆ ನೀಡಿದರು. ನಗರಸಭೆಯ ನೂರಾರು ಪೌರ ಕಾರ್ಮಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಜನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.

ನಗರದ ಮುಖ್ಯ ರಸ್ತೆಗಳಲ್ಲಿ ಶವಯಾತ್ರೆ ಮೆರವಣಿಗೆ ನಡೆಸಿ ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಅರಿವು ಮೂಡಿಸಿದರು. ಅಲ್ಲದೇ ಪ್ಲಾಸ್ಟಿಕ್ ಬಳಕೆ ಮಾಡಿದರೆ ದಂಡ ವಿಧಿಸಲಾಗುತ್ತದೆಂದು  ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು.

ನಗರಸಭೆಯ ಆಯುಕ್ತ ಡಿ.ಲೋಹಿತ್, ನಿರ್ಗಮಿತ ಆಯುಕ್ತ ಉಮಾಕಾಂತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next