Advertisement
ಮಹಾತ್ಮಾ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ನಗರಸಭೆ ಹಾಗೂ ವಿವಿಧ ಸಂಘ ಸಂಸ್ಥೆಗಳು ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಹಾಗೂ ಶ್ರಮದಾನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ್ ಎಸ್.ಎನ್., ಪೌರಾಯುಕ್ತ ಮನ್ಸೂರ್ ಅಲಿ, ಪರಿಸರ ಅಭಿಯಂತರರು ಸೇರಿದಂತೆ ಅನೇಕರು ಜೋಳಿಗೆ ಹಾಕುವ ಮೂಲಕ ಕಾಲೇಜು ಆವರಣದಲ್ಲಿ ಹಾಗೂ ನಗರದ ವಿವಿಧೆಡೆ ಬೀಸಾಡಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಜೋಳಿಗೆಗೆ ಹಾಕಿಕೊಂಡರು.
ನಗರಸಭೆಯ ಪರಿಸರ ಅಭಿಯಂತರ ಗಿರೀಶ ತಳವಾರ ಪ್ಲಾಸ್ಟಿಕ್ ಮುಕ್ತ ಅಭಿಯಾನ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ವಿವಿಧ ಶಾಲಾ ಕಾಲೇಜಿನ ಎನ್.ಎಸ್.ಎಸ್. ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು ಪ್ಲಾಸ್ಟಿಕ್ ಮುಕ್ತ ಅಭಿಯಾನದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.