Advertisement

ಪ್ಲಾಸ್ಟಿಕ್‌ ಬಳಕೆ: 2.12 ಕೋಟಿ ರೂ. ದಂಡ ವಸೂಲಿ

10:48 AM Nov 11, 2019 | Suhan S |

ಬೆಂಗಳೂರು: ಕಳೆದ ಏಪ್ರಿಲ್‌ನಿಂದ ಅಕ್ಟೋಬರ್‌ ಅಂತ್ಯದವರೆಗೆ ಪರಿಸರಕ್ಕೆ ಮಾರಕವಾಗುವ 37 ಸಾವಿರ ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ ಅನ್ನು ಬಿಬಿಎಂಪಿಯ ಅಧಿಕಾರಿಗಳು ವಶ ಪಡಿಸಿಕೊಂಡಿದ್ದು, 2.12 ಕೋಟಿ ರೂ. ದಂಡ ವಸೂಲಿ ಮಾಡಿದ್ದಾರೆ.

Advertisement

ನಿಷೇಧಿತ ಪ್ಲಾಸ್ಟಿಕ್‌ ಅಭಿಯಾನದಲ್ಲಿ ಕಳೆದ ಎಪ್ರಿಲ್‌ನಿಂದ ಅಕ್ಟೋಬರ್‌ ಅಂತ್ಯದವರೆಗೆ ಬಿಬಿಎಂಪಿಯ ಎಂಟು ವಲಯದ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್‌ ಉತ್ಪನ್ನಗಳಾದ ಕ್ಯಾರಿ ಬ್ಯಾಗ್‌, ಸ್ಪೂನ್‌, ಪ್ಲೇಟ್‌ ಸೇರಿದಂತೆ ಇನ್ನಿತರ ಮಾರಾಟ ಮಳಿಗೆ ಹಾಗೂ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಮಾಡುವ ಹೋಟಲ್‌, ರೆಸ್ಟೋರೆಂಟ್‌, ಅಂಗಡಿ ಮುಂಗಟ್ಟುಗಳ ಮೇಲೆ ಬಿಬಿಎಂಪಿ ಸಾರ್ವಜನಿಕ ಆರೋಗ್ಯ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದು, ಒಟ್ಟು 37,577 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್‌ ಅನ್ನು ವಶಕ್ಕೆ ಪಡೆದಿದ್ದಾರೆ. ನಿಷೇಧಿತ ಪ್ಲಾಸ್ಟಿಕ್‌ ಮಾರಾಟಗಾರರಿಂದ 2,12,39,141 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ)ಡಿ. ರಂದೀಪ್‌ ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next