Advertisement

2ರಿಂದ ಪ್ಲಾಸ್ಟಿಕ್‌ ಮುಕ್ತ ಬಾಗಲಕೋಟೆ: ರಾಮಚಂದ್ರನ್‌

10:10 AM Sep 25, 2019 | Suhan S |

ಬಾಗಲಕೋಟೆ: ಕೇಂದ್ರ ಸರ್ಕಾರದ ಸ್ವಚ್ಛ ಭಾರತ ಮಿಷನ್‌ ಅಡಿ ಅಕ್ಟೋಬರ್‌ 2ರಿಂದ ಬಾಗಲಕೋಟೆ ಜಿಲ್ಲೆಯನ್ನು ಪ್ಲಾಸ್ಟಿಕ್‌ ಮುಕ್ತವನ್ನಾಗಿ ಮಾಡಲಾಗುವುದು. ಎಲ್ಲಿಯೇ ಪ್ಲಾಸ್ಟಿಕ್‌ ಬಳಕೆ ಮತ್ತು ಮಾರಾಟ ಕಂಡು ಬಂದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಹೇಳಿದರು.

Advertisement

ಜಿಲ್ಲಾಡಳಿತ ಭವನದ ಸಭಾಭವನದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಪ್ಲಾಸ್ಟಿಕ್‌ ಮುಕ್ತ ಭಾರತ ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದನ್ನು ಜಿಲ್ಲೆಯಲ್ಲೂ ಪರಿಣಾಮಕಾರಿಯಾಗಿ

ಅನುಷ್ಠಾನಗೊಳಿಸಲಾಗುವುದು. ಜಿಲ್ಲೆಯ ಸಾರ್ವಜನಿಕರು, ವ್ಯಾಪಾರಸ್ಥರು, ಜಿಲ್ಲಾಡಳಿತದೊಂದಿಗೆ ಸಹಕರಿಸಿ, ಪ್ಲಾಸ್ಟಿಕ್‌ ಬಳಕೆಯ ಬದಲು ಪರ್ಯಾಯ ವ್ಯವಸ್ಥೆಗೆ ಹೊಂದಿಕೊಳ್ಳಬೇಕು ಎಂದು ಮನವಿ ಮಾಡಿದರು.

ನಗರ, ಗ್ರಾಮೀಣ ಭಾಗದ ಜನನಿಬಿಡ ಪ್ರದೇಶಗಳಲ್ಲಿ ಪ್ಲಾಸ್ಟಿಕ್‌ ಬಳಸದಂತೆ ಎಚ್ಚರಿಸುವ ಫಲಕ ಹಾಕಬೇಕು. ಪ್ರತಿ ವಾರ ನಡೆಯುವ ಸಂತೆ, ಅಂಗಡಿಗಳ ಮೇಲೆ ಸಂಬಂಧಿಸಿದ ಅಧಿಕಾರಿಗಳು ದಾಳಿ ನಡೆಸಿ, ಪ್ಲಾಸ್ಟಿಕ್‌ ಮಾರಾಟ ಕಂಡು ಬಂದರೆ ಕ್ರಮ ಕೈಗೊಳ್ಳಬೇಕು. ಒಂದು ಬಾರಿ ಬಳಕೆ ಮಾಡಿದ ಅಥವಾ ಬೀಸಾಡಿದ ಪ್ಲಾಸ್ಟಿಕ್‌ ಉತ್ಪನಗಳನ್ನು ಹಣ್ಣು, ತರಕಾರಿ ಮುಂತಾದವುಗಳನ್ನು ತುಂಬಲು ಬಳಸುವ ಪ್ಲಾಸ್ಟಿಕ್‌ ಕವರ, ಫುಡ್‌ ಪ್ಯಾಕೇಟ್‌, ಸ್ಪ್ರಾ ಕಪ್ಪು ಮುಂತಾದವುಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಜಿಪಂ ಸಿಇಒ ಮೊಹ್ಮದ ಇಕ್ರಮಮುಲ್ಲಾ ಶರೀಫ್‌, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಗರಿಮಾ ಪೊನ್ವಾರ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯ ಮೆಕ್ಕಳಕಿ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next